ಪರಿಷತ್ ಚುನಾವಣೆಯಲ್ಲಿ ಬೆಂಬಲಕ್ಕೆ ಎಚ್ಡಿಕೆ ಜತೆ ಚರ್ಚೆ: ಬಿಎಸ್ವೈ
Team Udayavani, Nov 26, 2021, 6:58 AM IST
ಶಿವಮೊಗ್ಗ: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜತೆಗೆ ಮಾತುಕತೆ ನಡೆಸಲಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿ ಜೆಡಿಎಸ್ನವರು ಸ್ಪರ್ಧಿಸಿ ಲ್ಲವೋ ಅಲ್ಲಿ ನಮಗೆ ಬೆಂಬಲ ನೀಡಲು ಅವರಲ್ಲಿ ಮನವಿ ಮಾಡಿ ಕೊಂಡಿದ್ದೇನೆ. 25 ಕ್ಷೇತ್ರಗಳ ಪೈಕಿ 20ರಲ್ಲಿ ಬಿಜೆಪಿ ಸ್ಪ ರ್ಧಿಸಿದ್ದು, 15 ಮಂದಿ ಗೆಲ್ಲುವುದು ಖಚಿತ. ಇದರಿಂದ ವಿಧಾನ ಪರಿಷತ್ನಲ್ಲಿ ನಮಗೆ ಬಹುಮತ ಸಿಕ್ಕಂತಾಗುತ್ತದೆ ಎಂದು ಹೇಳಿದರು.
ಪ್ರಧಾನಿ ಮೋದಿ ಮಾರ್ಚ್ವರೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಆಹಾರ ಧಾನ್ಯ ವಿತರಣೆ ಮಾಡುತ್ತೇವೆ ಎಂಬ ತೀರ್ಮಾನ ತೆಗೆದುಕೊಂಡಿರುವುದು ಸ್ವಾಗತಾರ್ಹ. ಕಾಂಗ್ರೆಸ್ನ ಸ್ನೇಹಿತರು ಕೇವಲ ಟೀಕೆ ಮಾಡಿಕೊಂಡು ಹೊರಟಿದ್ದಾರೆ. ಚುನಾವಣ ಫಲಿತಾಂಶ ಬಂದ ಬಳಿಕ ಅವರಿಗೆ ವಾಸ್ತವ ಸ್ಥಿತಿ ಅರಿವಾಗುತ್ತದೆ. ಅಲ್ಲಿವರೆಗೆ ಅವರ ವಿಚಾರ ನಾನೇನೂ ಮಾತನಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ