ಮಂಗಳ ಗ್ರಹದಲ್ಲಿ ಮನೆ ನಿರ್ಮಾಣಕ್ಕೆ ಭೂಲೋಕದಲ್ಲಿ  ಸಿದ್ಧಗೊಳ್ಳುತ್ತಿವೆ ಇಟ್ಟಿಗೆ!

Team Udayavani, Apr 22, 2022, 7:10 AM IST

Untitled-1

ಬೆಂಗಳೂರು: ಮಂಗಳ ಗ್ರಹದಲ್ಲಿ ಮನೆ ನಿರ್ಮಿಸುವ ಭವಿಷ್ಯದ ಕನಸಿಗೆ ಈಗಾಗಲೇ ಭೂಲೋಕದಲ್ಲಿ ಇಟ್ಟಿಗೆಗಳು ಸಿದ್ಧಗೊಂಡಿವೆ!

ಇಲ್ಲಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ವಿಜ್ಞಾನಿ ಗಳು, ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ (ಇಸ್ರೋ) ಸಹಭಾಗಿತ್ವದಲ್ಲಿ ಇಂತಹದ್ದೊಂದು ವಿನೂತನ ಪ್ರಯೋಗ ನಡೆಸಿ, ಅದರಲ್ಲಿ ಯಶಸ್ವಿಯೂ ಆಗಿದ್ದಾರೆ.

ಅದರಂತೆ ಮಂಗಳನ ಮಣ್ಣನ್ನು ಕೃತಕವಾಗಿ ಮರುಸೃಷ್ಟಿಸಿ ಈ ಇಟ್ಟಿಗೆ ರೂಪಿಸಲಾಗಿದೆ. ಭೂಮಿಗೆ ಹೋಲಿಸಿದರೆ, ಮಂಗಳ ಗ್ರಹದ ವಾತಾವರಣ ನೂರು ಪಟ್ಟು ತೆಳುವಾಗಿರುವುದರಿಂದ ಅಲ್ಲಿನ ಮಣ್ಣು ಸಹಜವಾಗಿ ಇಟ್ಟಿಗೆಯಂತೆ ಗಟ್ಟಿರೂಪ ತಾಳುವ ಗುಣ ಹೊಂದಿಲ್ಲ. ಹೀಗಾಗಿ ಮಂಗಳನ ಮಣ್ಣು ಗಟ್ಟಿಗೊಳ್ಳುವಂತಹ ವಿಧಾನವನ್ನು ಐಐಎಸ್ಸಿ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಇಟ್ಟಿಗೆ ನಿರ್ಮಾಣಗೊಂಡಿದ್ದು ಹೀಗೆ :

ಮೊದಲಿಗೆ ಮಂಗಳ ಗ್ರಹದ ಮಣ್ಣನ್ನು ಪ್ರಯೋಗಾಲಯದಲ್ಲಿ ಕೃತಕವಾಗಿ ಸೃಷ್ಟಿಸಿದ್ದಾರೆ. ಈ ಮಣ್ಣನ್ನು ಸಸ್ಯಜನ್ಯ ಅಂಟು, ನ್ಪೊರಸಾರ್ಸಿನ ಪಾಸ್ಟಿಯುರಿ ಎನ್ನುವ ಬ್ಯಾಕ್ಟೀರಿಯಾ, ಯೂರಿಯಾ, ನಿಕ್ಕೆಲ್‌ ಕ್ಲೋರೈಡ್‌ ಅನ್ನು ಮಿಶ್ರಣ ಮಾಡಿ ಸ್ಲರಿ ರೂಪ ತಂದಿದ್ದಾರೆ. ಈ ಸ್ಲರಿಯನ್ನು ಯಾವುದೇ ಆಕೃತಿಯ ಅಚ್ಚಿಗೆ ಸುರಿಯಬಹುದಾಗಿದೆ. ಕೆಲವು ದಿನಗಳ ಅನಂತರ ಬ್ಯಾಕ್ಟೀರಿಯಾವು ಯೂರಿಯಾವನ್ನು ಕ್ಯಾಲ್ಸಿಯಂ ಕಾಬೋìನೆಟ್‌ನ ಹರಳುಗಳನ್ನಾಗಿ ಪರಿವರ್ತಿಸುತ್ತದೆ. ಹರಳುಗಳು ಮತ್ತು ಸೂûಾ¾ಣು ಜೀವಿಗಳನ್ನು ಸೃಜಿಸುವ ಬಯೋ ಪಾಲಿಮರ್‌ಗಳು ಮಣ್ಣಿನ ಕಣಗಳನ್ನು ಹಿಡಿದಿಡುವ ಸಿಮೆಂಟ್‌ ರೀತಿ ಕಾರ್ಯನಿರ್ವಹಿಸುತ್ತವೆ.

ಸವಾಲಿನ ಕೆಲಸ :

“ಮಂಗಳನ ಮಣ್ಣನ್ನು ಬಳಸಿ ಇಟ್ಟಿಗೆ ನಿರ್ಮಾಣ ಮಾಡುವುದು ಸವಾಲಿನ ಕೆಲಸವಾಗಿತ್ತು. ಮಂಗಳನ ಮಣ್ಣಿನಲ್ಲಿ ಅಪಾರ ಪ್ರಮಾಣದ ಕಬ್ಬಿಣದ ಅಂಶವಿದೆ. ಇದು ಜೀವಿಗಳಿಗೆ ವಿಷಕಾರಿಯಾಗಿ ಪರಿಣಮಿಸುತ್ತದೆ. ಆರಂಭದಲ್ಲಿ ನಮ್ಮ ಬ್ಯಾಕ್ಟೀರಿಯಾ ಈ ಮಣ್ಣಿನಲ್ಲಿ ಬೆಳೆಯಲೇ ಇಲ್ಲ, ಈ ಸಂದರ್ಭದಲ್ಲಿ ನಿಕ್ಕೆಲ್‌ ಕ್ಲೋರೈಡ್‌ ಬಳಸಿ ಮಂಗಳನ ಮಣ್ಣುನ್ನು ಬ್ಯಾಕ್ಟಿರಿಯಾ ಬೆಳೆಯಲು ಯೋಗ್ಯಗೊಳಿಸಲಾಯಿತು. ಇದು ನಮ್ಮ ಸಂಶೋಧನೆಯ ಮಹತ್ವದ ಘಟ್ಟ’ ಎಂದು ಈ ಸಂಶೋಧನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಐಐಎಸ್ಸಿಯ ಮೆಕಾನಿಕಲ್‌ ಎಂಜಿನಿಯರಿಂಗ್‌ ವಿಭಾಗದ ಸಹ ಪ್ರಾಧ್ಯಾಪಕ ಅಲೋಕ್‌ ಕುಮಾರ್‌ ವಿವರಿಸಿದ್ದಾರೆ.

ಪ್ರಯೋಗ ಮುಂದುವರಿಯಲಿದೆ :

ಇಟ್ಟಿಗೆಯ ಮೇಲೆ ಮಂಗಳನ ವಾತಾವರಣ ಮತ್ತು ಕಡಿಮೆ ಗುರುತ್ವಕಾರ್ಷಣೆಯ ಪರಿಣಾಮದ ಅಧ್ಯಯನಕ್ಕೆ ಚಿಂತನೆ ನಡೆದಿದೆ. ಭೂಮಿಯ ವಾತಾವರಣಕ್ಕಿಂತ ಮಂಗಳನ ವಾತಾವರಣ ನೂರುಪಟ್ಟು ತೆಳುವಾಗಿದೆ. ಹಾಗೆಯೇ ಶೇ. 95ರಷ್ಟು ಇಂಗಾಲಾಮ್ಲವನ್ನು ಹೊಂದಿವೆ. ಇದು ಬ್ಯಾಕ್ಟೀರಿಯಾದ ಬೆಳವಣಿಗೆಯ ಮೇಲೆ ಕೆಟ್ಟಪರಿಣಾಮ ಬೀರಬಹುದು. ಆದ್ದರಿಂದ ಸಂಶೋಧಕರು ಮಂಗಳ ಗ್ರಹದ ವಾತಾವರಣವನ್ನು ಹೋಲುವ ಚೇಂಬರ್‌ವೊಂದನ್ನು ನಿರ್ಮಿಸಿದ್ದು ಇಲ್ಲಿ ಪ್ರಯೋಗ ಮುಂದುವರಿಯಲಿದೆ ಎಂದು ಅಲೋಕ್‌ ಕುಮಾರ್‌ ಹೇಳಿದ್ದಾರೆ.

ಇಟ್ಟಿಗೆ ಮಂಗಳನಲ್ಲಿಗೆ :

ಮಂಗಳ ಗ್ರಹದ ಪರಿಸ್ಥಿತಿಯಲ್ಲಿ ಬ್ಯಾಕ್ಟೀರಿಯಾದ ಬೆಳವಣಿಗೆಯ ಮೇಲೆ ನಿಗಾ ಇಡಲು ಉಪಕರಣವೊಂದನ್ನು ನಿರ್ಮಿಸಲಾಗಿದೆ. ಇಸ್ರೋದ ನೆರವಿನೊಂದಿಗೆ ಈ ಇಟ್ಟಿಗೆಯನ್ನು ಮಂಗಳ ಗ್ರಹಕ್ಕೆ ಕಳುಹಿಸಿ ಅಲ್ಲಿ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಪರಿಶೀಲಿಸುವ ಯೋಜನೆ ರೂಪಿಸಲಾಗಿದೆ ಎಂದು ಈ ಯೋಜನೆಯಲ್ಲಿ ಭಾಗಿಯಾಗಿರುವ ಇನ್ನೋರ್ವ ವಿಜ್ಞಾನಿ ರಶ್ಮಿ ದೀಕ್ಷಿತ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.