ಡಿಕೆಶಿ ನನ್ನ ಕಾಲಿಗೆ ಹಲವಾರು ಸಲ ಬಿದ್ದಿದ್ದರು, ಬೇಕಾದರೆ ವಿಡಿಯೋ ನೀಡುವೆ: ಯೋಗೇಶ್ವರ್

ರಾಮನಗರದ ಕಾಳಗ: ಕೆಪಿಸಿಸಿ ಅಧ್ಯಕ್ಷರಿಗೆ ಎಚ್ಚರಿಕೆ ನೀಡಿದ ಸಿಪಿ ಯೋಗೇಶ್ವರ್

Team Udayavani, Jul 31, 2020, 9:48 AM IST

ಡಿಕೆಶಿ ನನ್ನ ಕಾಲಿಗೆ ಹಲವಾರು ಸಲ ಬಿದ್ದಿದ್ದರು, ಬೇಕಾದರೆ ವಿಡಿಯೋ ನೀಡುವೆ: ಯೋಗೇಶ್ವರ್

ಬೆಂಗಳೂರು: ತನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಮನವಿ ಮಾಡಿ ಯೋಗಶ್ವರ್ ನನ್ನ ಕಾಲಿಗೆ ಬಿದ್ದಿದ್ದರು ಎಂಬ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿರುವ ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್, ಡಿಕೆಶಿ ಹಲವಾರು ಬಾರಿ ನನ್ನ ಕಾಲಿಗೆ ಬಿದ್ದಿದ್ದರು ಎಂದಿದ್ದಾರೆ.

ಬಿಜೆಪಿ ಪಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದಲ್ಲಿ ತಮಗೆ ವಿಧಾನ ಪರಿಷತ್ ಸ್ಥಾನ ಹಾಗೂ ಸಚಿವ ಸ್ಥಾನ ನೀಡುವ ಬಗ್ಗೆ ಆರು ತಿಂಗಳ ಹಿಂದೆಯೇ ದೆಹಲಿ ಹಾಗೂ ರಾಜ್ಯದ ವರಿಷ್ಠರು ಸ್ಪಷ್ಟ ಭರವಸೆ ನೀಡಿದ್ದರು. ಮೂರು ತಿಂಗಳ ಹಿಂದೆಯೇ ವಿಧಾನಪರಿಷತ್ತಿಗೆ ನಾಮನಿರ್ದೇಶನ ಮಾಡುವ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪನವರು ಮನೆಗೆ ಕರೆದು ಹೇಳಿದ್ದರು. ಇಷ್ಟೆಲ್ಲಾ ಇರುವಾಗ 30 ತಿಂಗಳ ನಂತರ ಬರಲಿರುವ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡುವಂತೆ ನಾನು ಈಗಲೇ ಯಾಕೆ ಡಿಕೆ ಶಿವಕುಮಾರ್ ಮನೆಗೆ ಹೋಗಿ ಟಿಕೆಟ್ ಕೇಳಲಿ ಎಂದಿದ್ದಾರೆ.

ಡಿಕೆ ಶಿವಕುಮಾರ್ ಅವರ ಹಸಿ ಸುಳ್ಳನ್ನು ಮೂರ್ಖರು ನಂಬುವುದಿಲ್ಲ. ಇನ್ನು ಜನಸಾಮಾನ್ಯರು ನಂಬುವ ಪ್ರಶ್ನೆ ಉದ್ಭವಿಸುವುದೇ ಇಲ್ಲ. ಒಂದು ವೇಳೆ ಡಿಕೆಶಿ ಮಾಧ್ಯಮಗಳ ಎದುರು ಹೇಳಿರುವುದು ನಿಜವಾದರೆ ಅದನ್ನು ಸಾಬೀತು ಮಾಡಲು ಅವರ ಮನೆ ತುಂಬಾ ಹಾಗೂ ರಸ್ತೆಯಲ್ಲಿ ಕ್ಯಾಮರಾಗಳನ್ನು ಹಾಕಲಾಗಿದೆ. ದಯವಿಟ್ಟು ಅವರು ಸಾಕ್ಷಿಯನ್ನು ರಾಜ್ಯದ ಜನತೆ ಮುಂದೆ ಇಡಲಿ ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಹಲವಾರು ಬಾರಿ ಹಣ ಆಸ್ತಿ ಅಧಿಕಾರ ಪಕ್ಷ ಸಂಘಟನೆ ಸೇರಿದಂತೆ ವಿವಿಧ ರೀತಿಯ ಅನುಕೂಲಗಳಿಗಾಗಿ ಡಿಕೆ ಶಿವಕುಮಾರ್ ಅವರು ನನ್ನ ಕಾಲಿಗೆ ಹಲವಾರು ಬಾರಿ ಬಿದ್ದಿರುವ ವಿಡಿಯೋ ದೃಶ್ಯಗಳು ಇವೆ. ಅವರು ಬೇಕೆಂದರೆ ರಾಜ್ಯದ ಜನತೆ ಮುಂದೆ ವಿಡಿಯೋ ದೃಶ್ಯಗಳನ್ನು ಪ್ರದರ್ಶಿಸುವೆ ಎಂದು ಸಿಪಿ ಯೋಗೇಶ್ವರ್ ಸವಾಲು ಹಾಕಿದ್ದಾರೆ.

ಇದನ್ನೂ ಓದಿ:ಬಿಎಸ್ ವೈ ಸಿಎಂ ಆಗಿ ಮುಂದುವರಿಯಬೇಕೆಂದು ಕುಮಾರಸ್ವಾಮಿ, ಡಿಕೆಶಿ ಬಯಸುತ್ತಾರೆ: ಯೋಗೇಶ್ವರ್

ನಾನು ಕಳೆದ ಬಾರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದಲೇ ಸ್ಪರ್ಧಿಸಿ ಪರಾಜಿತನಾಗಿದ್ದೇನೆ.‌ ನಾನು ಬಿಜೆಪಿ ತತ್ವಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿದ್ದೇನೆ. ಡಿಕೆ ಶಿವಕುಮಾರ್ ಸಹೋದರರು ಭಾರತೀಯ ಜನತಾ ಪಕ್ಷ ರಾಜ್ಯ ಸರ್ಕಾರ ಹಾಗೂ ನನ್ನ ನಡುವೆ ವಿಷ ಬೀಜ ಬಿತ್ತುವ ವಿಫಲ ಪ್ರಯತ್ನ ಮಾಡುತ್ತಿದ್ದಾರೆ ಅವರು ಅದರಲ್ಲಿ ಯಶಸ್ವಿಯಾಗುವುದಿಲ್ಲ ಎಂದರು.

ಇನ್ನು ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಿದ್ದಾರೆ ಎಂಬ ಸುಳಿವನ್ನು ಅರಿತಿರುವ ಡಿಕೆ ಶಿವಕುಮಾರ್ ಬಿಜೆಪಿ ಮುಖಂಡರು ನನಗೆ ಸಚಿವ ಪದವಿ ನೀಡುವುದನ್ನು ತಪ್ಪಿಸಲು ದುರುದ್ದೇಶದಿಂದ ಈ ರೀತಿಯ ನಿರಾಧಾರ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿರುವ ಡಿಕೆ ಶಿವಕುಮಾರ್ ಇಂತಹ ನಿರಾಧಾರ ಆರೋಪಗಳನ್ನು ಮಾಡಿರುವುದರಿಂದ ಆ ಸ್ಥಾನಕ್ಕೆ ಹಾಗೂ ಕುರ್ಚಿಗೆ ಕಳಂಕ ಬಂದಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೌರವವನ್ನೇ ಹಾಳು ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಸಿ.ಪಿ.ಯೋಗೇಶ್ವರ್ ಅವರೇನು ಮೆಂಟಲ್ ಆಗಿದ್ದಾರಾ? ಡಿ.ಕೆ.ಶಿವಕುಮಾರ್ ತಿರುಗೇಟು

ಹೊಟ್ಟೆಕಿಚ್ಚು ಅಸಹನೆಯಿಂದ ಇತರರು ಬೆಳೆಯುವುದನ್ನು ನೋಡುವ ವ್ಯವಧಾನವಿಲ್ಲ .ತಮ್ಮ ನೀಚತನವನ್ನು ಮತ್ತೆ ಮತ್ತೆ ಪ್ರದರ್ಶಿಸುವ ಮೂಲಕ ತಾವು ಈ ಹಿಂದಿನ ಶಿವಕುಮಾರ್ ಎಂಬುದನ್ನು ಅವರೇ ಪದೇಪದೇ ಸಾಬೀತುಪಡಿಸಿ ಕೊಳ್ಳುತ್ತಿದ್ದಾರೆ ಎಂದು ಸಿಪಿ ಯೋಗೇಶ್ವರ್ ಆರೋಪಿಸಿದರು.

ಇನ್ನು ಮುಂದೆ ಇಂತಹದೇ ಆರೋಪಗಳನ್ನು ಮಾಡುವುದು ಮುಂದುವರಿಸಿದರೆ ಬೆಂಗಳೂರು ಹಾಗೂ ರಾಮನಗರದಲ್ಲಿ ಸುದ್ದಿಗೋಷ್ಠಿ ಕರೆದು ಅವರ ರಾಜಕೀಯ ಜೀವನದ ಬಗ್ಗೆ ರಾಜ್ಯದ ಜನತೆ ಮುಂದೆ ಹೇಳಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.