ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಪುಟ ಸಭೆ ಒಪ್ಪಿಗೆ
Team Udayavani, Jul 1, 2022, 7:28 PM IST
ಬೆಂಗಳೂರು : ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಮಾಡುವಂತೆ ರಾಜ್ಯ ಸಚಿವ ಸಂಪುಟ ಉಪಸಮಿತಿ ಸಭೆ ಸರಕಾರಕ್ಕೆ ಶಿಫಾರಸು ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ.
ಇದರಿಂದ ದಶಕಗಳಿಂದ ನಡೆಯುತ್ತಿದ್ದ ಹಿಂದೂ ಸಮುದಾಯದ ಬೇಡಿಕೆ ಈಡೇರಿದಂತಾಗಿದೆ. ಸಿದದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ದತ್ತಪೀಠ ವಿವಾದ ಇನ್ನೊಂದು ಮಜಲಿಗೆ ಹೊರಳಿತ್ತು. ಈ ಸಂಬಂಧ ರಚಿಸಿದ್ದ ಸಮಿತಿ ಹಿಂದೂ ಅರ್ಚಕರ ನೇಮಕ ಕ್ಕೆ ಅವಕಾಶ ನೀಡಿರಲಿಲ್ಲ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದಕ್ಕೆ ಸಂಬಂಧಪಟ್ಟಂತೆ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಿತ್ತು. ಸುದೀರ್ಘ ಚರ್ಚೆಯ ಬಳಿಕ ಸಂಪುಟ ಉಪಸಮಿತಿ ತನ್ನ ವರದಿ ನೀಡಿದೆ.
ಸಂಪುಟ ಉಪಸಮಿತಿ ವರದಿಯನ್ನು ಸರಕಾರ ಒಪ್ಪಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮೆಲ್ಲರ ಬಹು ವರ್ಷಗಳ ಹೋರಾಟಕ್ಕೆ ಇಂದು ಫಲ ಲಭಿಸಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ
ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?
ನಾಲ್ವರ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ
MUST WATCH
ಹೊಸ ಸೇರ್ಪಡೆ
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ
ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್, ಡಯೆಟ್ಗೆ ಸಹಕಾರಿ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ