ಸಂಪುಟ ವಿಸ್ತರಣೆ: ಬಹಿರಂಗವಾಗಿ ಮಾತನಾಡುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತದೆ
Team Udayavani, Dec 4, 2020, 11:53 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಶಾಸಕರು ಅಥವಾ ಮುಖಂಡರು ಬಹಿರಂಗವಾಗಿ ಮಾತನಾಡುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದರು. ನಗರದಲ್ಲಿ ಶುಕ್ರವಾರ ರಾತ್ರಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರ ಜೊತೆ ಮಾತಮಾಡಿದ ಅವರು
ಸಚಿವ ಸಂಪುಟ ವಿಸ್ತರಣೆ ಕುರಿತು ಕೋರ್ ಕಮಿಟಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಅದು ಮುಖ್ಯಮಂತ್ರಿಯವರಿಗೆ ಇರುವ ಪರಮಾಧಿಕಾರ. ಈ ವಿಷಯದಲ್ಲಿ ಅವರು ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಆದ್ದರಿಂದ ಶಾಸಕರು ಬಹಿರಂಗ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಸಭೆ ಸೂಕ್ಷ್ಮವಾಗಿ ಎಚ್ಚರಿಕೆ ನೀಡಿದೆ ಎಂದು ಲಿಂಬಾವಳಿ ಹೇಳಿದರು.
ಸಭೆಯಲ್ಲಿ ಯಾರು ಮಂತ್ರಿ ಆಗಬೇಕು ಎನ್ನುವ ಬಗ್ಗೆಯೂ ಚರ್ಚೆಯಾಗಿಲ್ಲ. ವಿಸ್ತರಣೆ ಹಾಗೂ ದಿನಾಂಕ ನಿಗದಿ ಮಾಡುವ ಅಧಿಕಾರ ಸಹ ಮುಖ್ಯಮಂತ್ರಿಯವರದ್ದಾಗಿದೆ ಎಂದರು.
ಕೋರ್ ಕಮಿಟಿ ಸಭೆಯಲ್ಲಿ ಪ್ರಮುಖವಾಗಿ ನಾಲ್ಕಾರು ವಿಷಯಗಳ ಬಗ್ಗೆ ಚರ್ಚೆಯಾಯಿತು. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಕ್ಷದ ಉಸ್ತುವಾರಿಗಳು ಚುನಾವಣೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದರು.
ಡಿ.5ರಂದು ನಡೆಯುವ ರಾಜ್ಯ ಕಾರ್ಯಕಾರಿಣಿಯಲ್ಲಿ ಎರಡು ಮಹತ್ವದ ವಿಷಯಗಳ ಬಗ್ಗೆ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಲಾಗುವುದು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆಗೆ ಕಾಯ್ದೆ ಮಾಡುವಂತೆ ನಿರ್ಣಯ ಅಂಗೀಕರಿಸಕಾಗುವದು ಎಂದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರಪತಿ ಪೊಲೀಸ್ ಪದಕ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ