ಸಂಪುಟ ವಿಸ್ತರಣೆಯೋ? ಪುನಾರಚನೆಯೋ?

ಮೂಡದ ಒಮ್ಮತ ; ಖಾಲಿ ಸ್ಥಾನ ಭರ್ತಿಗೆ ಸಿದ್ದು ಒಲವು,ಸಂಪುಟ ಪುನಾರಚನೆಗೆ ಪರಂ ಪಟ್ಟು

Team Udayavani, May 30, 2019, 6:00 AM IST

29BNP-(25)

ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರ ನಡುವೆಯೇ ಭಿನ್ನಾಭಿಪ್ರಾಯ ಮೂಡಿದೆ.

ಸದ್ಯದ ಪರಿಸ್ಥಿತಿಯಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು, ಬಿಜೆಪಿಯ ‘ಆಪರೇಷನ್‌ ಕಮಲ’ ತಡೆಯಲು ಅತೃಪ್ತರ ಮನವೊಲಿಕೆಗಾಗಿ ಸಂಪುಟ ವಿಸ್ತರಣೆ ಮಾತ್ರ ಮಾಡಬೇಕಾ? ಅಥವಾ ಪುನಾರಚನೆಗೆ ಕೈ ಹಾಕಬೇಕಾ? ಎನ್ನುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದ್ದು, ಈ ವಿಷಯದಲ್ಲಿ ನಾಯಕರ ನಡುವೆ ಒಮ್ಮತ ಮೂಡಿಲ್ಲ.

ಬುಧವಾರ ಬೆಳಗ್ಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಎಂ.ಬಿ.ಪಾಟೀಲ್ ಪಾಲ್ಗೊಂಡಿದ್ದರು. ಸಚಿವಾಕಾಂಕ್ಷಿಗಳು ಹೆಚ್ಚಾಗಿದ್ದು, ಯಾವುದೇ ಸಚಿವರನ್ನು ಕೈ ಬಿಟ್ಟು ಬೇರೆಯವರಿಗೆ ಅವಕಾಶ ನೀಡುವುದರಿಂದ ಅತೃಪ್ತ ಶಾಸಕರ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಬಹುದು. ಹೀಗಾಗಿ, ಹಾಲಿ ಖಾಲಿ ಇರುವ ಮೂರು ಸ್ಥಾನಗಳನ್ನು ಮಾತ್ರ ಭರ್ತಿ ಮಾಡಿ ಇಬ್ಬರು ಪಕ್ಷೇತರರು ಹಾಗೂ ಕಾಂಗ್ರೆಸ್‌ನ ಒಬ್ಬರು ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಆದರೆ, ಉಪ ಮುಖ್ಯಮಂತ್ರಿ ಡಾ. ಪರಮೇಶ್ವರ್‌ ಸಂಪುಟ ಪುನಾರಚನೆಗೆ ಒಲವು ವ್ಯಕ್ತಪಡಿಸಿದ್ದಾರೆ. ಪುನಾರಚನೆ ಮಾಡುವುದಾದರೆ ಹಿರಿಯ ಸಚಿವರಾದ ಕೆ.ಜೆ.ಜಾರ್ಜ್‌, ಆರ್‌.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್ ಸೇರಿದಂತೆ ಐದಾರು ಹಾಲಿ ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡುವ ಮೂಲಕ ಅತೃಪ್ತರನ್ನು ಸಮಾಧಾನ ಪಡಿಸಬಹುದು ಎಂಬ ಲೆಕ್ಕಾಚಾರ ಮುಂದಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಜಾರ್ಜ್‌ ಹಾಗೂ ದೇಶಪಾಂಡೆಯವರನ್ನು ಕೈ ಬಿಡುವ ಪ್ರಸ್ತಾವಕ್ಕೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಷಯದಲ್ಲಿ ಇಬ್ಬರೂ ನಾಯಕರ ನಡುವೆ ಒಮ್ಮತ ಮೂಡಿಲ್ಲ ಎಂದು ತಿಳಿದು ಬಂದಿದೆ. ಈ ಕುರಿತು ಗುರುವಾರ ವೇಣುಗೋಪಾಲ್ ನೇತೃತ್ವದಲ್ಲಿ ಮತ್ತೂಂದು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಇದರ ನಡುವೆ ರಮೇಶ್‌ ಜಾರಕಿಹೊಳಿಯೊಂದಿಗೆ ಗುರುತಿಸಿಕೊಂಡಿದ್ದಾರೆ ಎನ್ನಲಾದ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹಾಗೂ ಲಿಂಗಸಗೂರು ಶಾಸಕ ಡಿ.ಎಸ್‌.ಹೂಲಗೇರಿ ಅವರನ್ನು ಸಭೆಗೆ ಕರೆಸಿ ಯಾವುದೇ ಕಾರಣಕ್ಕೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಮನವೊಲಿಸುವ ಪ್ರಯತ್ನ ನಡೆಸಲಾಯಿತು. ಸಚಿವಾಕಾಂಕ್ಷಿಗಳಾದ ಜೇವರ್ಗಿ ಶಾಸಕ ಡಾ.ಅಜಯ್‌ ಸಿಂಗ್‌ ಹಾಗೂ ಯಲ್ಲಾಪುರ ಶಾಸಕ ಶಿವರಾಮ್‌ ಹೆಬ್ಟಾರ್‌ ಕೂಡ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ, ಸಂಪುಟ ಸೇರುವ ಬಯಕೆ ವ್ಯಕ್ತಪಡಿಸಿದ್ದಾರೆ.

ದೇವೇಗೌಡರಿಗೆ ರಾಜ್ಯಸಭೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ರಾಜ್ಯಸಭೆಗೆ ಕಳುಹಿಸಿ ಕೊಡಬೇಕೆಂಬ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿಷಯ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಸಾಧ್ಯವಾದರೆ ಕಾಂಗ್ರೆಸ್‌ನಿಂದ ಹೆಚ್ಚು ಅವಧಿ ಹೊಂದಿರುವ ರಾಜ್ಯಸಭಾ ಸದಸ್ಯರಿಂದ ರಾಜೀನಾಮೆ ಪಡೆದು, ದೇವೇಗೌಡರಿಗೆ ಅವಕಾಶ ಕಲ್ಪಿಸಿಕೊಡುವ ಬಗ್ಗೆ ಆಲೋಚನೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ರಾಜ್ಯಸಭೆಗೆ ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್‌ ಹಾಗೂ ಸೈಯದ್‌ ನಾಸೀರ್‌ ಹುಸೇನ್‌ ಅವರ ಅವಧಿ 2024ರ ವರೆಗೆ ಇದೆ.

ಎಂಬಿಪಿಗೆ ಕೆಪಿಸಿಸಿ? ಪಕ್ಷದ ನಾಯಕತ್ವ ಬದಲಾವಣೆ ಕುರಿತಂತೆಯೂ ಚರ್ಚೆ ನಡೆಯುತ್ತಿದ್ದು, ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಎಂ.ಬಿ.ಪಾಟೀಲ್ ಅವರನ್ನು ಸಂಪುಟದಿಂದ ಕೈ ಬಿಟ್ಟು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡುವ ಕುರಿತಂತೆಯೂ ಚರ್ಚೆಯಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬದಲಾವಣೆ ಮಾಡಲು ತೀರ್ಮಾನಿಸಿದರೆ, ಹಾಲಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ. ನಾವು 2 ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದೇವೆ. ನಮ್ಮ ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಾಗಿದ್ದಾರೆ. ಬಿಜೆಪಿಯವರು
ಆರಂಭದಿಂದಲೂ ಸರ್ಕಾರ ಉರುಳಿಸುವಪ್ರಯತ್ನ ನಡೆಸುತ್ತಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ಹಿರಿಯ ನಾಯಕರ ಅಭಿಪ್ರಾಯಪಡೆದು ತೀರ್ಮಾನ ಮಾಡುತ್ತೇವೆ.
-ಕೆ.ಸಿ.ವೇಣುಗೋಪಾಲ್‌ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ.

ಸರ್ಕಾರ ಉರುಳಿಸಲು ಬಿಜೆಪಿಯವರು ಏನು ಪ್ರಯತ್ನ ಮಾಡುತ್ತಾರೋ ಮಾಡಲಿ, ಅವರಿಗೆ ಒಳ್ಳೆಯದಾಗಲಿ. ಸಂಪುಟ ವಿಸ್ತರಣೆಯ ಬಗ್ಗೆ ರಾಜ್ಯ ಉಸ್ತುವಾರಿ ತೀರ್ಮಾನ ತೆಗೆದು ಕೊಳ್ಳುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ, ಸಣ್ಣಪುಟ್ಟ ವಿಷಯಗಳ ಬಗ್ಗೆ ಈಗ ತಲೆ ಕೆಡಿಸಿಕೊಳ್ಳುವು ದಿಲ್ಲ. ಸರ್ಕಾರವನ್ನು ಉಳಿಸಿಕೊಳ್ಳುವುದು ನಮ್ಮ ಮೊದಲ ಆದ್ಯತೆ.
– ಡಿ.ಕೆ.ಶಿವಕುಮಾರ್‌, ಜಲ ಸಂಪನ್ಮೂಲ ಸಚಿವ

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.