ಇಂದು ಸಂಜೆಯೊಳಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಅಂತಿಮ: ಸಿಎಂ ಬೊಮ್ಮಾಯಿ
Team Udayavani, May 29, 2022, 10:54 AM IST
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದ ಬಗ್ಗೆ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಇಂದು ಸಂಜೆಯೊಳಗೆ ತೀರ್ಮಾನ ಮಾಡುತ್ತಾರೆ. ಮೂರನೇ ಅಭ್ಯರ್ಥಿಯ ಬಗ್ಗೆಯೂ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದರು.
ಸಿಎಂ ಭೇಟಿ ಮಾಡಿದ ಜಿಟಿಡಿ: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ರವಿವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.
ಇದನ್ನೂ ಓದಿ:ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಭಾ.ಮ.ಹರೀಶ್ ಆಯ್ಕೆ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, 2021ರಲ್ಲಿ ಮೈಸೂರಿನಲ್ಲಿ ಮಳೆಹಾನಿಯಿಂದ ಕೆರೆಕಟ್ಟೆಗಳು ಒಡೆದು ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಹಾನಿಯಾಗಿತ್ತು. ಹೀಗಾಗಿ 138 ಕೋಟಿ ರೂ. ಪ್ರಪೋಸಲ್ ಕಳುಸಲಾಗಿತ್ತು. ಅದು ಇದುವರೆಗೂ ಬಿಡುಗಡೆಯಾಗಿರಲಿಲ್ಲ. ಆದರೆ ಶಾಸಕ ರಾಮದಾಸ್ ಕ್ಷೇತ್ರಕ್ಕೆ 40 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಆದರೆ ನಾನು ಎರಡು ಸಲ ಪ್ರಪೋಸಲ್ ಕೊಟ್ಟಿದ್ದರು ಆಗಿರಲಿಲ್ಲ. ದಯವಿಟ್ಟು ಹಣ ಬಿಡುಗಡೆ ಮಾಡಿ ಎಂದು ನಾನು ಹೇಳಿದ್ದೆ. ದಾವೋಸ್ ಗೆ ಹೋಗಿ ಬಂದಮೇಲೆ ಮಾಡುತ್ತೇನೆ ಎಂದಿದ್ದರು. ಹೀಗಾಗಿ ನಾನು ಖುದ್ದಾಗಿ ಬಂದು ಭೇಟಿ ಮಾಡಿದ್ದೇನೆ. ತುರ್ತಾಗಿ 27 ಕೋಟಿ ರೂ. ಬಿಡುಗಡೆ ಮಾಡಲು ಸಿಎಂ ಸೂಚಿಸಿದ್ದಾರೆ ಎಂದು ಜಿ.ಟಿ.ದೇವೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಂ.ಸಿ ಸುಧಾಕರ್, ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ: ಕೆ.ಹೆಚ್ ಮುನಿಯಪ್ಪ ತೀವ್ರ ಅಸಮಾಧಾನ
ಉದಯಪುರ ಘಟನೆ; ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ; ಸಚಿವ ಆರಗ
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಉದಯಪುರ ಕೊಲೆ ಅಪರಾಧಿಗಳನ್ನು ಗಲ್ಲಿಗೇರಿಸಬೇಕು: ಸಿಎಂ ಬೊಮ್ಮಾಯಿ
ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!
MUST WATCH
ಹೊಸ ಸೇರ್ಪಡೆ
ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ
ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ
ಕುಣಿಗಲ್: ಕೆಂಪೇಗೌಡರಿಗೆ ಅಪಮಾನವಾದ ಸ್ಥಳದಲ್ಲಿ ಪ್ರತಿಮೆ ನಿರ್ಮಾಣ: ಕೆಂಪೇಗೌಡ ಸೇನೆ ತಿರ್ಮಾನ
ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ
400 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’