ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇಂದು
Team Udayavani, Jun 25, 2019, 3:00 AM IST
ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಮಂಗಳವಾರ ದೆಹಲಿಯಲ್ಲಿ ನಡೆಯಲಿದೆ. ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.
ಜೂನ್ ತಿಂಗಳಲ್ಲಿ ಕರ್ನಾಟಕ 9.19 ಟಿಎಂಸಿ ನೀರು ಬಿಡಬೇಕಿತ್ತು. ಬಿಳಿಗುಂಡ್ಲು ಮೂಲಕ 1.72 ಟಿಎಂಸಿ ನೀರು ಬಿಡಲಾಗಿದೆ. ಬಾಕಿ 7.47 ಟಿಎಂಸಿ ನೀರು ಬಿಡಲು ಕರ್ನಾಟಕಕ್ಕೆ ಸೂಚನೆ ನೀಡಿ ಎಂದು ತಮಿಳುನಾಡು ಪ್ರಾಧಿಕಾರದ ಮುಂದೆ ಮನವಿ ಮಾಡುವ ಸಾಧ್ಯತೆಯಿದೆ.
ಆದರೆ, ಕಾವೇರಿ ಕೊಳ್ಳದಲ್ಲಿ ವಾಡಿಕೆಯಷ್ಟು ಮಳೆ ಆಗಿಲ್ಲ. ಮಳೆ ಆಗಿಲ್ಲದಿರುವುದರಿಂದ ಜಲಾಶಯಗಳಲ್ಲಿ ನೀರಿಲ್ಲ. ರಾಜ್ಯದಲ್ಲೇ ಬೆಳೆಗಳಿಗೆ ಮತ್ತು ಕುಡಿಯಲು ನೀರಿಲ್ಲ. ಹೀಗಾಗಿ, ನೀರು ಬಿಡಲು ಸಾಧ್ಯವಿಲ್ಲ. ಮುಂದೆ ಮಳೆ ಬಂದರಷ್ಟೇ ನೀರು ಬಿಡಲಾಗುವುದು ಎಂದು ವಾದ ಮಂಡಿಸಲು ಕರ್ನಾಟಕ ಮುಂದಾಗಿದೆ. ಎರಡೂ ವಾದ ಆಲಿಸಿ ಪ್ರಾಧಿಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಅಪಘಾತ : ಇಬ್ಬರು ಸಾವು, ಓರ್ವ ಗಂಭೀರ
ವಿಜಯಪುರ ಜಿಲ್ಲೆಯಲ್ಲಿ ಮಳೆ ಅವಾಂತರ : 25 ಮನೆಗಳಿಗೆ ಹಾನಿ, 3 ಜಾನುವಾರು ಬಲಿ
ಅಕ್ಬರ್,ಟಿಪ್ಪು,ಅಲೆಗ್ಸಾಂಡರನ್ನು ಮಾತ್ರ ಮಹಾನ್ ಎಂದು ಚಿತ್ರಿಸಿದ್ದೇಕೆ?:ಬಿಜೆಪಿ ಪ್ರಶ್ನೆ
ಎಂಟು ವಾರದಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಗಿಸಲು ಸುಪ್ರೀಂ ನಿರ್ದೇಶನ
ಬೆಂಗಳೂರು; ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶವಿಲ್ಲ : ಸಿಎಂ ಬೊಮ್ಮಾಯಿ