Examination ಕೇಂದ್ರಗಳ ಸಿಸಿ ಕೆಮರಾ ದುರಸ್ತಿ ಖರ್ಚು ಶಾಲೆಗೆ
Team Udayavani, Feb 19, 2024, 6:30 AM IST
ಬೆಂಗಳೂರು: ಮಾರ್ಚ್ ಮತ್ತು ಎಪ್ರಿಲ್ ತಿಂಗಳಲ್ಲಿ ನಡೆಯುವ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಕೆಮರಾಗಳು ಸುಸ್ಥಿತಿಯಲ್ಲಿ ಇಲ್ಲದಿದ್ದರೆ ಆವುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿರುವ ಶಾಲೆ/ಕಾಲೇಜುಗಳಲ್ಲಿ ಲಭ್ಯವಿರುವ ಸಂಚಿತ ನಿಧಿಯಿಂದ ಭರಿಸಿ ಸರಿಪಡಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.