
ಯಾವುದೇ ಕ್ಷಣದಲ್ಲಾದರೂ ವೇಳಾಪಟ್ಟಿ ಘೋಷಣೆ; ಸನ್ನದ್ಧರಾಗಿರಲು ಸೂಚನೆ
ಸಕಲ ಸಿದ್ಧತೆಗೆ ಜಿಲ್ಲಾಡಳಿತಕ್ಕೆ ಸೂಚನೆ
Team Udayavani, Mar 25, 2023, 7:05 AM IST

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದ್ದು, ಯಾವುದೇ ಕ್ಷಣದಲ್ಲಾದರೂ ಕೇಂದ್ರ ಚುನಾವಣ ಆಯೋಗ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದ್ದು, ಸಕಲ ರೀತಿಯಲ್ಲೂ ಸನ್ನದ್ಧರಾಗಿರುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಸೂಚಿಸಿದೆ.
ಕೇಂದ್ರ ಚುನಾವಣ ಆಯೋಗವು ಯಾವುದೇ ಕ್ಷಣದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ವೇಳಾಪಟ್ಟಿ ಘೋಷಿಸುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಮಾದರಿ ಚುನಾವಣ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಿದ್ಧವಾಗಿರುವಂತೆ ಮುಖ್ಯ ಚುನಾವಣ ಅಧಿಕಾರಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಿಗೆ ಸೂಚಿಸಿದ್ದಾರೆ. ರಾಜ್ಯ ವಿಧಾನಸಭೆಗೆ ಎಪ್ರಿಲ್ ಅಥವಾ ಮೇಯಲ್ಲಿ ಚುನಾವಣೆ ನಡೆಯಲಿದೆ.
ಮಾದರಿ ಚುನಾವಣೆ ನೀತಿ ಸಂಹಿತೆ ಅನುಷ್ಠಾನಕ್ಕೆ ಅಗತ್ಯ ಇರುವ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯ ಚುನಾವಣ ಅಧಿಕಾರಿ ತಿಳಿಸಿದ್ದಾರೆ.
ವೇಳಾಪಟ್ಟಿ ಘೋಷಣೆಗೂ ಮುನ್ನ ಕೆಲವು ಮಹತ್ವದ ಚಟುವಟಿಕೆಗಳು ಬಾಕಿ ಉಳಿದಿದ್ದು, ಅವುಗಳನ್ನು ತತ್‌ಕ್ಷಣವೇ ಪೂರ್ಣಗೊಳಿಸುವಂತೆ ತುರ್ತು ಸೂಚನೆ ಹೊರಡಿಸಿದ್ದಾರೆ.
ಜಿಲ್ಲಾ ಚುನಾವಣ ಅಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಮಾದರಿ ಚುನಾವಣೆ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಿದ್ಧತೆ ಮಾಡಿಕೊಳ್ಳಬೇಕು. ತಮ್ಮ ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ಈಗಾಗಲೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್‌ಗಳು, ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು ಎಂದು ಮುಖ್ಯ ಚುನಾವಣ ಅಧಿಕಾರಿ ತಿಳಿಸಿದ್ದಾರೆ.
ನೀತಿ ಸಂಹಿತೆ ಅನ್ವಯಗೊಳಿಸಲು ಅಗತ್ಯವಿರುವ ಎಲ್ಲಾ ಮಾಹಿತಿಗಳ ಕೈಪಿಡಿಗಳನ್ನು ಮುಖ್ಯ ಚುನಾವಣ ಅಧಿಕಾರಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಚುನಾವಣೆ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಭದ್ರತೆ ಹೆಚ್ಚಳ, ಮತದಾರರಿಗೆ ಆಮಿಷ ನೀಡದಂತೆ ಎಚ್ಚರಿಕೆ ವಹಿಸುವುದು, ಅಕ್ರಮವಾಗಿ ಹಣ, ಮದ್ಯ, ಉಡುಗೊರೆಗಳನ್ನು ಸಾಗಿಸುವುದಕ್ಕೆ ಕಡಿವಾಣ ಹಾಕುವುದು, ಸರಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷಗಳ ಸಭೆ ಸಮಾರಂಭ ನಡೆಸದಂತೆ ನೋಡಿಕೊಳ್ಳಬೇಕು ಹಾಗೂ ಅವುಗಳಿಗೆ ಅವಕಾಶವನ್ನೂ ನೀಡಬಾರದು. ಅಭ್ಯರ್ಥಿಗಳ ಖರ್ಚು ಮತ್ತು ವೆಚ್ಚಗಳ ಕುರಿತು ನಿಗಾ ಇಡುವುದು. ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ವಹಿಸುವುದು ಸೇರಿ ನೀತಿ ಸಂಹಿತೆಯ ಅಂಶಗಳನ್ನು ಅನುಷ್ಠಾನಕ್ಕೆ ತರಲು ಈಗಿನಿಂದಲೇ ಜಿಲ್ಲಾ ಚುನಾವಣಾಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ಸೂಚನೆ ನೀಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

cow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು