Prajwal ಪಾಸ್ಪೋರ್ಟ್ ರದ್ದತಿಗೆ ಸ್ಪಂದಿಸದ ಕೇಂದ್ರ ಸರಕಾರ: ಪರಮೇಶ್ವರ್
Team Udayavani, May 23, 2024, 12:09 AM IST
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಜತೆಗೆ ಎಸ್ಐಟಿ ಪತ್ರ ಬರೆದಿದೆ. ಈವರೆಗೂ ಕೇಂದ್ರ ಸರಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದರು.
ಕೇಂದ್ರ ಸರಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರಂಟ್ ಜಾರಿಯಾದ ಅನಂತರ ಪಾಸ್ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರಕಾರದ ಕರ್ತವ್ಯ ಎಂದರು.
ಡಿಸಿಎಂ ಅವರದ್ದು ಎನ್ನಲಾದ ಆಡಿಯೋ ಕುರಿತು ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತನಾಡುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಎಸ್ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದೆ. ಕುಮಾರಸ್ವಾಮಿ ಅವರು ತನಿಖೆ ಹೀಗೆ ನಡೆಯಬೇಕು, ಹಾಗೇ ಮಾಡಬೇಕು ಅಂತ ಹೇಳಿದಹಾಗೇ ಕಾಣುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ
ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು
ಅನುಚಿತ ವರ್ತನೆ ; ಜೆಸ್ಕಾಂ ಗುತ್ತಿಗೆದಾರನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್ಡಿಕೆ
ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.