ಕೋವಿಡ್ ನಿಯಂತ್ರಣಕ್ಕೆ ರಾಜ್ಯಕ್ಕೆ ಕೇಂದ್ರದಿಂದ ಅಗತ್ಯ ನೆರವು: ಡಿ ವಿ ಸದಾನಂದ ಗೌಡ
Team Udayavani, Jul 17, 2020, 5:20 PM IST
ಬೆಂಂಗಳೂರು: ಕೋವಿಡ್-19 ಸೋಂಕು ನಿಯಂತ್ರಣ ಮಾಡುವ ಸಲುವಾಗಿ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ಎಲ್ಲಾ ಅಗತ್ಯ ನೆರವು ನೀಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದರು.
ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದ ಸಂದರ್ಭ ಕೇಂದ್ರ ಸಚಿವರು ಈ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ನೆರವು ನೀಡಲು ಸರಕಾರ ಬದ್ಧ. ರಾಜ್ಯ ಸರ್ಕಾರ ಕೇಳುವ ಎಲ್ಲಾ ರೀತಿಯ ನೆರವಿಗೆ ಕೇಂದ್ರ ಸರ್ಕಾರದಿಂದ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದರು.