ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ
Team Udayavani, Feb 4, 2021, 8:05 PM IST
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.
2018 ಡಿ 12 ರಿಂದ ಪ್ರತಾಪ್ ಚಂದ್ರ ಶೆಟ್ಟಿ ವಿಧಾನಪರಿಷತ್ ಸಭಾಪತಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತಮ್ಮ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಹಿನ್ನಲೆಯಲ್ಲಿ ವಿಧಾನಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜಿನಾಮೆ ಸಲ್ಲಿಸಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ರಾಜಿನಾಮೆ ಸಲ್ಲಿಸಲು ಸಹಮತ ದೊರೆತಿತ್ತು.
ಇಂದು 10 ನಿಮಿಷಗಳ ವಿದಾಯ ಭಾಷಣದ ನಂತರ ರಾಜೀನಾಮೆ ನೀಡಿ, ಸದನವನ್ನು ಶುಕ್ರವಾರಕ್ಕೆ ಮುಂದೂಡಿದರು.
ಇದನ್ನೂ ಓದಿ: 60 ಅಡಿ ಸಮುದ್ರದಾಳದಲ್ಲಿ ತಾಳಿ ಕಟ್ಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ
ಸಂಖ್ಯಾಬಲಾಬಲದ ಮೇಲೆ ಸಭಾಪತಿಯ ಆಯ್ಕೆ ನಡೆದುಕೊಂಡು ಬರುತ್ತದೆ. ತಾಂತ್ರಿಕವಾಗಿ ನಾನು ಸಭಾಪತಿಯಾಗಿ ಮುಂದುವರಿಯಲು ಅವಕಾಶವಿದೆ. ಆದರೆ, ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಂದಿರುವುದರಿಂದ ಪೀಠಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಈ ವೇಳೆ ತಿಳಿಸಿದರು.
ಇದನ್ನೂ ಓದಿ: ದೇವರಕೆರೆಯಲ್ಲಿ ಜೀವ ವೈವಿಧ್ಯಕ್ಕೆ ಮಾರಕವಾದ ಪ್ಲೆಕೋ ಮೀನುಗಳು ಪತ್ತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ