ಚಾಮರಾಜನಗರ: 99 ಕೋವಿಡ್ ಪ್ರಕರಣಗಳು ಪತ್ತೆ: ಇಬ್ಬರು ಸಾವು
Team Udayavani, Aug 11, 2020, 6:45 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 99 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಓರ್ವ ವ್ಯಕ್ತಿ ಕೋವಿಡ್ನಿಂದ ಇನ್ನೋರ್ವರು ಕೋವಿಡೇತರ ಕಾರಣದಿಂದ ಮೃತಪಟ್ಟಿದ್ದಾರೆ. 47 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಹನೂರು ತಾಲೂಕಿನ ಎಲ್ಲೇಮಾಳ ಗ್ರಾಮದ 38 ವರ್ಷದ ವ್ಯಕ್ತಿ ಆ. 9ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.
ನಗರದ 70 ವರ್ಷದ ವೃದ್ಧ, ಮಧುಮೇಹದಿಂದ ಬಳಲುತ್ತಿದ್ದು, ಸೋಮವಾರ ಕೋವಿಡ್ ಆಸ್ಪತ್ರೆಗೆ ದಾಖಲಾದ ಕೆಲ ಹೊತ್ತಿನಲ್ಲೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ನಿಂದ ಮೃತರಾದವರ ಸಂಖ್ಯೆ15ಕ್ಕೇರಿದ್ದು, ಕೋವಿಡೇತರ ಕಾರಣದಿಂದ 9 ಮಂದಿ ಮೃತ ಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1320ಕ್ಕೇರಿದೆ. ಇವರಲ್ಲಿ 858 ಮಂದಿ ಗುಣಮುಖರಾಗಿದ್ದು, 438 ಸಕ್ರಿಯ ಪ್ರಕರಣಗಳಿವೆ.
ಗುಂಡ್ಲುಪೇಟೆ ತಾಲೂಕಿನಿಂದ 27, ಚಾಮರಾಜನಗರ ತಾಲೂಕಿನಿಂದ 28, ಕೊಳ್ಳೇಗಾಲ ತಾಲೂಕಿನಿಂದ 24, ಯಳಂದೂರು ತಾಲೂಕಿನಿಂದ 17 ಹಾಗೂ ಹನೂರು ತಾಲೂಕಿನಿಂದ 3 ಪ್ರಕರಣಗಳು ಮಂಗಳವಾರ ವರದಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ