ಚಾಮರಾಜನಗರ ಪ್ರಕರಣ: ವಾರದೊಳಗೆ ವರದಿ ನೀಡಲು  ಹೈಕೋರ್ಟ್‌ ಸೂಚನೆ

Team Udayavani, May 6, 2021, 6:51 AM IST

ಚಾಮರಾಜನಗರ ಪ್ರಕರಣ: ವಾರದೊಳಗೆ  ವರದಿ ನೀಡಲು  ಹೈಕೋರ್ಟ್‌ ಸೂಚನೆ

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 24 ಸೋಂಕಿತರು ಮೃತಪಟ್ಟ ಘಟನೆಗೆ ಸಂಬಂಧಿಸಿ ನಿವೃತ್ತ ನ್ಯಾ| ಎ.ಎನ್‌. ವೇಣುಗೋಪಾಲ ಗೌಡ ನೇತೃತ್ವದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ರಾಜ್ಯ ಮಟ್ಟದ ಮೇಲ್ವಿಚಾರಣ ಸಮಿತಿ ಒಂದು ವಾರದೊಳಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್‌ ಆದೇಶಿಸಿದೆ.

ಕೋವಿಡ್‌ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾ|  ಎ.ಎಸ್‌. ಓಕ್‌ ಹಾಗೂ ನ್ಯಾ| ಅರವಿಂದ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.

ನಿವೃತ್ತ ನ್ಯಾ| ಎ.ಎನ್‌. ವೇಣುಗೋಪಾಲ ಗೌಡ ನೇತೃತ್ವದ  ಸಮಿತಿ  ಕೋವಿಡ್‌ಗೆ ಸಂಬಂಧಿಸಿ ಆಸ್ಪತ್ರೆಗಳಿಗೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದೆ. ಅದರಂತೆ ಚಾಮರಾಜನಗರ ಘಟನೆಯ ಬಗ್ಗೆಯೂ ಈ ಸಮಿತಿ ವಿಚಾರಣೆ ನಡೆಸಿ ಸತ್ಯ ಶೋಧನೆ ನಡೆಸಿ ಮೇ 10ಕ್ಕೆ ವರದಿಯನ್ನು ಸಲ್ಲಿಸಲಿ. ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸಬಾರದು ಎಂಬ ಉದ್ದೇಶದಿಂದ ವಿಚಾರಣೆಗೆ ವಹಿಸಲಾಗುತ್ತಿದೆ. ಸಮಿತಿಗೆ ಸರಕಾರ ಅಗತ್ಯ ಸಹಕಾರ ನೀಡಬೇಕು ಎಂದು  ನ್ಯಾಯಪೀಠ ಆದೇಶಿಸಿತು.

ದಾಖಲೆ ಜಪ್ತಿಗೆ ಆದೇಶ :

ಆಕ್ಸಿಜನ್‌ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದ ಘಟನೆಯ ಹಿನ್ನೆಲೆಯಲ್ಲಿ ಘಟನೆ ನಡೆದ ದಿನಗಳು ಮತ್ತು ಆಕ್ಸಿಜನ್‌ ಪೂರೈಕೆಗೆ ಸೀಮಿತವಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆ, ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಗಳ ಎಲ್ಲ ದಾಖಲೆಗಳನ್ನು ಜಪ್ತಿ ಮಾಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ ಹೈಕೋರ್ಟ್‌, ಈ ದಾಖಲೆಗಳನ್ನು ನ್ಯಾ| ವೇಣುಗೋಪಾಲ ಗೌಡ ನೇತೃತ್ವದ ಸಮಿತಿ ಹಾಗೂ ಸರಕಾರ ನೇಮಿಸಿರುವ ಐಎಎಸ್‌ ಅಧಿಕಾರಿಗೆ ಲಭ್ಯವಾಗಿಸುವಂತೆ  ಸೂಚಿಸಿತು.

ನ್ಯಾಯಾಂಗ ತನಿಖೆಗೆ ಆದೇಶ :

ವಿಚಾರಣೆ ವೇಳೆ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರಕಾರ ಒಪ್ಪಿದ್ದು, ಈ ಸಂಬಂಧ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರಂತೆ ಹೈಕೋರ್ಟ್‌ ನಿವೃತ್ತ ನ್ಯಾ| ಬಿ. ಎ. ಪಾಟೀಲ್‌ ಅವರನ್ನು ನೇಮಿಸಲಾಗಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ ಆದೇಶದ ಪ್ರತಿಯನ್ನು ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.