ರಾಜ್ಯದ ವಿವಿಗಳಲ್ಲಿ ಕುಲಪತಿ ಹುದ್ದೆ ಖಾಲಿ: ಹುದ್ದೆ ಭರ್ತಿಗೆ ಸರ್ಕಾರ ನಿರ್ಲಕ್ಷ್ಯ

Team Udayavani, Jul 10, 2022, 2:49 PM IST

11VV

ಬೆಂಗಳೂರು: ಕೊರೊನಾ ಕಾಲಘಟ್ಟದ ಬಳಿಕ ರಾಜ್ಯದಲ್ಲಿ ಸಂಪೂರ್ಣವಾಗಿ ಶೈಕ್ಷಣಿಕ ಚಟುವಟಿಕೆಗಳು ಪುನಾರಂಭಗೊಂಡಿವೆ. ಆದರೆ, ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳಾದ ಬೆಂಗಳೂರು, ತುಮಕೂರು, ದಾವಣಗೆರೆ, ಕೃಷಿ, ಜಾನಪದ ವಿವಿ ಸೇರಿದಂತೆ ಪ್ರಮುಖ ವಿವಿಗಳಲ್ಲಿ ಕುಲಪತಿಗಳೇ ಇಲ್ಲದೆ ಆಡಳಿತಾತ್ಮಕ ನಿರ್ಧಾರಗಳಿಗೆ ಹಿನ್ನಡೆಯಾಗುತ್ತಿದೆ.

ಪದವಿ ಕಾಲೇಜುಗಳ ಪ್ರವೇಶಾತಿ ಆರಂಭವಾಗಿದ್ದು, ಮೊದಲ ವರ್ಷದ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುತ್ತಿದ್ದಾರೆ. 2 ಮತ್ತು 3ನೇ ವರ್ಷದ ತರಗತಿಗಳು ಆರಂಭವಾಗಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನವಾಗುತ್ತಿದೆ. ಆದರೆ, ವಿಶ್ವ ವಿದ್ಯಾಲಯಗಳಲ್ಲಿ ಕುಲಪತಿಗಳಿಲ್ಲದೆ, ಪ್ರಭಾರ ಹುದ್ದೆಗಳಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಇದು ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ.

ವಿಶ್ವವಿದ್ಯಾಲಯಗಳು ಪ್ರತಿಯೊಂದನ್ನು ಆನ್‌ ಲೈನ್‌ ಮೂಲಕವೇ ನಡೆಸಬೇಕು ಎಂಬ ರೂಪಿಸಿದೆ. ಹೀಗಾಗಿ, ಎನ್‌ಇಪಿ ಜಾರಿಯಾಗಿರುವುದರಿಂದ ಮೊದಲ ಸೆಮಿಸ್ಟರ್‌ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ತಾಂತ್ರಿಕವಾಗಿ ಸಮಸ್ಯೆಯಾಗಿದೆ. ಯುಯುಸಿಎಂ ಎಸ್‌ನಲ್ಲಿ ಮೌಲ್ಯಮಾಪನ ಸಮಸ್ಯೆ, ಕಾಲೇಜುಗಳ ಮಾನ್ಯತೆ, ವಿದ್ಯಾರ್ಥಿಗಳ ನೋಂದಣಿ ತೊಡಕುಗಳು ಉಂಟಾಗಿವೆ. ಇದು ವಿದ್ಯಾರ್ಥಿಗಳ ಮೇಲೆಯೂ ಪರಿಣಾಮ ಬೀರುತ್ತಿದೆ ಎಂದು ಶಿಕ್ಷಣ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 81 ಮಂದಿ ಜೈಲು ಸಿಬ್ಬಂದಿಗೆ ಲಂಚ ನೀಡಿದ ಸುಕೇಶ್ ಚಂದ್ರಶೇಖರ್: ಪೊಲೀಸ್ ತನಿಖೆ

ಶೋಧನಾ ಸಮಿತಿ ವರದಿ ನೀಡಿ ತಿಂಗಳಾಯ್ತು

ಕುಲಪತಿಗಳ ನೇಮಕ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ಶೋಧನಾ ಸಮಿತಿ ವರದಿ ನೀಡಿ ತಿಂಗಳು ಗಳೇ ಕಳೆದಿವೆ. ಆದರೂ ಕೂಡ ಸರ್ಕಾರ ಕುಲಪತಿಗಳ ನೇಮಕ ಮಾಡುವಲ್ಲಿ ವಿಳಂಬ ಮಾಡುತ್ತಿದೆ. ಬೆಂಗಳೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಕೆ.ಆರ್‌. ವೇಣುಗೋಪಾಲ್‌ ನೇತೃತ್ವದ ಶೋಧನಾ ಸಮಿತಿಯು ತುಮಕೂರು ವಿವಿ ಕುಲಪತಿ ನೇಮಕಾತಿಗೆ ಮೇ 30ರಂದು ವರದಿ ನೀಡಿದೆ. ದಾವಣಗೆರೆ ವಿವಿ ಕುಲಪತಿ ಗಳ ನೇಮಕಕ್ಕೆ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಕೆ. ತುಳಸಿ ಮಾಲಾ ನೇತೃತ್ವದ ಸಮಿತಿಯು ಮೇ 30ರಂದು ಸರ್ಕಾರಕ್ಕೆ ವರದಿ ನೀಡಿದೆ. ಅದೇ ರೀತಿ ಬೆಂಗಳೂರು ವಿವಿಗೆ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ಕುಲಪತಿ ಡಾ. ಎಸ್‌. ವಿದ್ಯಾಶಂಕರ್‌ ನೇತೃತ್ವದ ಸಮಿತಿಯು ಜೂ.23ರಂದು ವರದಿ ನೀಡಿದೆ.

ಪ್ರಮುಖ ಹೆಸರುಗಳು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ರಾಜೀವಗಾಂಧಿ ವಿವಿ ಪ್ರಭಾರ ಕುಲಪತಿಗಳಾಗಿ ಅಧಿಕಾರ ನಿರ್ವಹಿಸಿರುವ ದಂತ ವೈದ್ಯ ಡಾ. ಜಯಕರಶೆಟ್ಟಿ, ಕೆಎಸ್‌ಒಯು ಕುಲಸಚಿವ ಪ್ರೊ. ಆರ್‌. ರಾಜಣ್ಣ ಹಾಗೂ ಯುವಿಸಿಇ ಪ್ರಾಂಶುಪಾಲರಾದ ಪ್ರೊ. ರಮೇಶ್‌ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಕುಲಪತಿ ಹುದ್ದೆ ಖಾಲಿ ಇರುವ ವಿವಿಗಳು: ಹಾವೇರಿಯ ಜಾನಪದ ವಿವಿ, ಶಿವಮೊಗ್ಗ, ಬೀದರ್‌, ಧಾರವಾಡ ಕೃಷಿ ವಿವಿಗಳಲ್ಲಿ ಕುಲಪತಿ ಹುದ್ದೆಗಳು ಖಾಲಿ ಇವೆ. ಬೆಂಗಳೂರು ಕೃಷಿ ವಿವಿ ಕುಲಪತಿ ಪ್ರೊ. ರಾಜೇಂದ್ರ ಪ್ರಸಾದ್‌ ಇದೇ ವರ್ಷದ ಸೆ.30ಕ್ಕೆ ಮತ್ತು ರಾಯಚೂರು ಕೃಷಿ ವಿವಿ ಕುಲಪತಿ ಡಾ. ಕೆ.ಎನ್‌. ಕಟ್ಟಿಮನಿ ಅವಧಿ ಅ.17ರಂದು ಪೂರ್ಣಗೊಳ್ಳಲಿದೆ.

ವಿಶ್ವವಿದ್ಯಾಲಯಗಳಲ್ಲಿ ಕುಲಪತಿಗಳು, ಕುಲಸಚಿವರು ಮತ್ತು ಪ್ರಾಧ್ಯಾಪಕರ ಹುದ್ದೆಗಳು ಭರ್ತಿಯಾಗಿದ್ದಾಗ ಮಾತ್ರ ಶೈಕ್ಷಣಿಕ ಚಟುವಟಿಕೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗಲಿದೆ. ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಬಾರದು. -ಪ್ರೊ.ಎಂ.ಎಸ್‌. ತಿಮ್ಮಪ್ಪ, ಬೆಂ.ವಿವಿ ವಿಶ್ರಾಂತ ಕುಲಪತಿ

-ಎನ್‌.ಎಲ್‌.ಶಿವಮಾದು

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.