

Team Udayavani, Nov 1, 2018, 12:34 PM IST
ಬೆಂಗಳೂರು: ಬಿಜೆಪಿ ನಾಯಕರ ನಡವಳಿಕೆ ಗೊತ್ತಾಗಿ ರಾಮನಗರದ ಅಭ್ಯರ್ಥಿಯಾಗಿದ್ದ ಎಲ್.ಚಂದ್ರಶೇಖರ್ ಹಿಂದೆ ಸರಿದು ಪಕ್ಷ ತೊರೆದಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಯಾರನ್ನೂ ಖರೀದಿ ಮಾಡಿಲ್ಲ. ಬಿಜೆಪಿಯವರು ಆಮಿಷವೊಡ್ಡಿ ಪಕ್ಷಕ್ಕೆ ಸೆಳೆದಿದ್ದರು. ಅಲ್ಲಿ ಹೋದ ಬಳಿಕ ಬಿಜೆಪಿ ನಾಯಕರ ನಡವಳಿಕೆ ಗೊತ್ತಾಗಿದೆ, ಹಾಗಾಗಿ ಚಂದ್ರಶೇಖರ್ ಪಕ್ಷ ತೊರೆದಿರಬಹುದು ಎಂದರು.
ನಾನು ನಮ್ಮ ಕಾರ್ಯಕರ್ತರಿಗೆ ಇನ್ನು ಎರಡು ದಿನ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲು ಬಯಸುತ್ತೇನೆ ಎಂದರು.
ಗುರುವಾರ ಬೆಳಗ್ಗೆ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಜೆಡಿಎಸ್ ಅಭ್ಯರ್ಥಿಯಾಗಿರುವ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.
Ad
ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್
Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್
BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ
Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್ ಸಿಂಹ
IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ
You seem to have an Ad Blocker on.
To continue reading, please turn it off or whitelist Udayavani.