ಚಂದ್ರಶೇಖರ ಗುರೂಜಿ ಹತ್ಯೆ: ಐದು ದಿನ ಹಿಂದೆಯೇ ಫೇಸ್‌ಬುಕ್‌ನಲ್ಲಿ ಸುಳಿವು ಕೊಟ್ಟಿದ್ದ ಆರೋಪಿ?
Team Udayavani, Jul 6, 2022, 10:21 AM IST
ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಆರೋಪಿ ಮಹಾಂತೇಶ ಶಿರೂರ ತನ್ನ ಫೇಸ್ ಬುಕ್ ಖಾತೆಯ ಪೋಸ್ಟ್‌ನಲ್ಲಿ ಸಂಭವಾಮಿ ಯುಗೇ ಯುಗೇ ಎಂಬ ಮಹಾಭಾರತದ ಶ್ರೀಕೃಷ್ಣನ ಸಂದೇಶ ಹಾಕಿಕೊಂಡಿದ್ದು, ಇದು ಗುರೂಜಿ ಹತ್ಯೆಯ ಬಗ್ಗೆ ಮೊದಲೇ ಸುಳಿವು ಕೊಟ್ಟಿದ್ದನೇ ಎಂಬ ಅನುಮಾನ ಮೂಡುತ್ತಿದೆ.
ಮಹಾಂತೇಶನು ಐದು ದಿನಗಳ ಹಿಂದೆ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ “ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನುಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನೂ ವಿಳಂಬ ಏಕೆ ಭಗವಂತ? ಆದಷ್ಟು ಬೇಗ ಅವತರಿಸು ಪ್ರಭು! ಸಂಭವಾಮಿ ಯುಗೇ ಯುಗೇ’ ಅಂತ ಬರೆದ ಪೋಸ್ಟ್ ಹಂಚಿಕೊಂಡಿದ್ದ.
ಇದೀಗ ಚಂದ್ರಶೇಖರ ಗುರೂಜಿ ಹತ್ಯೆ ಆಗುತ್ತಿದ್ದಂತೆ ಆತ ಮಾಡಿದ್ದ ಫೇಸ್‌ಬುಕ್ ಪೋಸ್ಟ್ ವೈರಲ್ ಆಗಿದೆ. ಗುರೂಜಿ ಹತ್ಯೆಯು ಪೂರ್ವ ನಿಯೋಜಿತವಾಗಿತ್ತೆ ಎಂಬ ಮಾತುಗಳು ಕೇಳಿಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್
2022ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ
ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಬೇಕು: ಮೊಟ್ಟೆ ಎಸೆದ ಕುರಿತು ಸಿಂಹ
ಸಾವರ್ಕರ್ ದೇಶಪ್ರೇಮಿ ಎಂದು ಯಾಕೆ ಕರೆಯಬೇಕು?: ಸಿದ್ದರಾಮಯ್ಯ
ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ಗೆ ಸಕಲ ಸಿದ್ಧತೆ