ಚನ್ನಪಟ್ಟಣ ಬೊಂಬೆ, ಕಿನ್ನಾಳ ಆಟಿಕೆ ವಿದೇಶಕ್ಕೆ ರಫ್ತು
Team Udayavani, Jan 18, 2021, 8:00 AM IST
ಬೆಂಗಳೂರು: ಚನ್ನಪಟ್ಟಣದ ಬೊಂಬೆ, ಕಿನ್ನಾಳ ಆಟಿಕೆಗಳು ಹಾಗೂ ಮೈಸೂರು ಸಿಲ್ಕ್ ಉತ್ಪನ್ನಗಳಿಗೆ ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಲು ಅಂಚೆ ಇಲಾಖೆ ಮುಂದಾಗಿದೆ.
ದೇಶೀಯ ಉತ್ಪನ್ನಗಳನ್ನು ರಫ್ತು ಮಾಡುವ ಕುರಿತಂತೆ ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಮುಂದಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆಯಿದೆ.
ಅಂಚೆ ಇಲಾಖೆಯು ಈ ಹಿಂದೆ ರಾಜ್ಯದ ಮಾವು ಅಭಿವೃದ್ಧಿ ಮತ್ತು ಮಾರಾಟ ನಿಗಮದ ಜತೆಗೂ ಒಡಂಬಡಿಕೆ ಮಾಡಿ ಕೊಂಡಿತ್ತು. ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಮನಗರ ಸಹಿತ ಬೆಂಗಳೂರು ಸುತ್ತಮುತ್ತಲಿನ ಬೆಳೆಗಾರರ ಮಾವುಗಳನ್ನು ಪಾರ್ಸೆಲ್ ಸೇವೆಯ ಮೂಲಕ ಗ್ರಾಹಕರ ಮನೆಬಾಗಿಲಿಗೆ ತಲುಪಿಸಿತ್ತು. ಇದು ಯಶಸ್ಸು ಪಡೆದ ಬಳಿಕ ಈಗ ಹೊಸ ಪ್ರಯತ್ನಕ್ಕೆ ಅಂಚೆ ಇಲಾಖೆ ಹೆಜ್ಜೆಯಿರಿಸಿದೆ.
ಚನ್ನಪಟ್ಟಣದ ಗೊಂಬೆ, ಕಿನ್ನಾಳ ಆಟಿಕೆ ಮತ್ತು ಮೈಸೂರು ಸಿಲ್ಕ್ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಬೇಡಿಕೆಯಿದೆ. ಅವುಗಳನ್ನು ಅಂಚೆ ಸೇವೆ ಮೂಲಕ ರಫ್ತು ಮಾಡುವ ಕುರಿತು ಶೀಘ್ರದಲ್ಲೇ ಸರಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಅಂಚೆ ಇಲಾಖೆಯ ಕರ್ನಾಟಕ ವೃತ್ತದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಅಂಗೈಯಲ್ಲೇ ಅಂಚೆ ಸೇವೆ :
ಈಗಾಗಲೇ ಕೇಂದ್ರ ಸರಕಾರದ ಎಲ್ಲ ಇಲಾಖೆಗಳು ಡಿಜಿಟಲೀಕರಣವಾಗಿದ್ದರೂ ಅಂಚೆ ಇಲಾಖೆ ಆ ನಿಟ್ಟಿನಲ್ಲಿ ನಿಧಾನಗತಿಯಲ್ಲಿದೆ ಎಂಬ ಮಾತು ಸಾರ್ವಜನಿಕರಿಂದ ಕೇಳಿಬಂದಿತ್ತು. ಈಗ ಅಂಚೆ ಇಲಾಖೆಯೂ ಕಂಪ್ಯೂಟರೀಕರಣಗೊಂಡಿದ್ದು, ಕರ್ನಾಟಕ ವೃತ್ತದ ಅಂಚೆ ವಿಭಾಗವು ರಾಷ್ಟ್ರಪತಿಗಳಿಂದ ಬಂಗಾರದ ಪದಕದ ಪುರಸ್ಕಾರ ಪಡೆದುಕೊಂಡಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್ ಹೇಳಿದ್ದಾರೆ.
ಚನ್ನಪಟ್ಟಣದ ಬೊಂಬೆ, ಕಿನ್ನಾಳ ಆಟಿಕೆಗಳು ಮತ್ತು ಮೈಸೂರು ಸಿಲ್ಕ್ ಉತ್ಪನ್ನಗಳನ್ನು ವಿದೇಶಗಳಿಗೆ ರಫ್ತು ಮಾಡುವ ಕುರಿತು ಸರಕಾರದೊಂದಿಗೆ ಶೀಘ್ರದಲ್ಲೇ ಒಡಂಬಡಿಕೆ ಮಾಡಿಕೊಳ್ಳಲಾಗುವುದು. – ಶಾರದಾ ಸಂಪತ್, ಚೀಫ್ ಪೋಸ್ಟ್ ಮಾಸ್ಟರ್ ಜನರಲ್
– ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು
ರಾಜ್ಯದಲ್ಲಿ ಕೋವಿಡ್ ಕಾಟಕ್ಕೆ ಒಂದು ವರ್ಷ :ಮಾ. 8ರಂದು ಮೊದಲ ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
ಬೆಳ್ಳೂಟಿ ಗೇಟ್ ಬಳಿ ನೀಲಗಿರಿ ತೋಪಿನಲ್ಲಿ ಬೆಂಕಿ ಅವಘಡ : ಬೆಂಕಿ ನಂದಿಸಲು ಹರಸಾಹಸ
ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಕಂಬಳ ಕರೆಗೆ ಶಾಶ್ವತ ವಿದಾಯ ಹೇಳಿದ ಅಲೆವೂರು- ತಡಂಬೈಲ್ ಕುಟ್ಟಿ.. ಅಭಿಮಾನಿಗಳ ಕಂಬನಿ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ