ಭಟ್‌ಗೆ ಶಾಕ್‌: ಶ್ರೀರಾಮ ವಿದ್ಯಾ ಸಂಸ್ಥೆಯ ದತ್ತಿ ನಿಧಿಗೆ ಬ್ರೇಕ್‌!

Team Udayavani, Aug 8, 2017, 12:28 PM IST

10.jpg

ಬೆಂಗಳೂರು : ಮಹತ್ವದ ವಿದ್ಯಮಾನವೊಂದರಲ್ಲಿ  ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಾಲಯದಿಂದ ನೀ‌ಡಲಾಗುತ್ತಿದ್ದ ದತ್ತಿ ನಿಧಿಯನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ಶಾಕ್‌ ನೀಡಿದೆ. 

ಮುಜರಾಯಿ ದೇಗುಲದಿಂದ ಶಾಲೆಗಳಿಗೆ ಅನುದಾನ ನೀಡುವಂತಿಲ್ಲ.ದೇವಾಲಯದ ಆಡಳಿತ ಮಂಡಳಿ  ಕಾನೂನು ಬಾಹಿರವಾಗಿ ದತ್ತಿ ನೀಡಿದೆ ಎಂದು ಸರ್ಕಾರ ದತ್ತಿಯನ್ನು ವಾಪಾಸ್‌ ಪಡೆದಿದೆ. 

ಅನುದಾನ ವಾಪಾಸ್‌ 
ಕಳೆದ 10 ವರ್ಷಗಳಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆಗೆ  2.32 ಕೋಟಿ ಅನುದಾನ ವನ್ನು ಕೊಲ್ಲೂರು ಮೂಕಾಂಬಿಕಾ ಆಡಳಿತ ಮಂಡಳಿ ನೀಡಿತ್ತು. ಅಂದಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೃಷ್ಣ ಪ್ರಸಾದ್‌ ಅಡ್ಯಂತಾಯ ಅವರು ಈ ಅನುದಾನವನ್ನು ಮಂಜೂರು ಮಾಡಿದ್ದರು ಎಂದು ಹೇಳಲಾಗಿದೆ. 10 ವರ್ಷಗಳಲ್ಲಿ ನೀಡಿರುವ ಅನುದಾನವನ್ನೂ ವಾಪಸ್‌ ಪಡೆಯಲು ಸರ್ಕಾರ ಚಿಂತನೆ ನಡೆಸಿದ್ದು, ಇಡೀ ಪ್ರಕರಣವನ್ನು ತನಿಖೆ ನಡೆಸಲು ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ. 

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಭಾಕರ್‌ ಭಟ್‌ ‘ದೇಗುಲಗಳು ಸಹಾಯ ಮಾಡಲೆಂದೇ ಇರುವುದು. ನಮ್ಮದು ಬಡವರು, ದುರ್ಬಲರು ಕಲಿಯುವ ಶಾಲೆ. ಸರ್ಕಾರ ಬಂದು ನಾಲ್ಕು ವರ್ಷಗಳ ಬಳಿಕ ದತ್ತಿ ನೀಡಿರುವುದು ಗಮನಕ್ಕೆ ಬಂತೆ?. ಕರಾವಳಿಯಲ್ಲಿ ಆದ ಬೆಳವಣಿಗೆಗಳ ಹಿನ್ನಲೆಯಲ್ಲಿ ಸರ್ಕಾರ ಉದ್ದೇಶಪೂರ್ವಕವಾಗಿ ಈ ಕ್ರಮ ಕೈಗೊಂಡಿದೆ’ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 

ಪ್ರಭಾಕರ್‌ ಭಟ್‌ ಮುಂದಾಳತ್ವದಲ್ಲಿ ನಡೆಸಲಾಗುತ್ತಿರುವ ಶ್ರೀರಾಮ ವಿದ್ಯಾ ಸಂಸ್ಥೆಗೆ ದೇವಾಲಯದಿಂದ ದತ್ತಿ ನೀಡಿರುವ ಕುರಿತಾಗಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ದೂರು ನೀಡಿದ್ದರು ಎನ್ನಲಾಗಿದೆ. 

ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.