13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಅಯೋಜನೆಗೆ ಮುಖ್ಯಮಂತ್ರಿ ಸಮ್ಮತಿ

Team Udayavani, Dec 1, 2020, 2:17 PM IST

film

ಬೆಂಗಳೂರು: ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ. ಆದಕಾರಣ, 2021ರ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ ಸಿನಿಮೋತ್ಸವವನ್ನು ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ಅವರ ನೇತೃತ್ವದ ನಿಯೋಗವು ಮಾಡಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಂದಿಸಿದ್ದಾರೆ.

ತಮ್ಮನ್ನು ಭೇಟಿ ಮಾಡಿದ ನಿಯೋಗವು ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಸತತ ಕಳೆದ 12 ವರ್ಷಗಳ ಕಾಲ ಯಶಸ್ಸನ್ನು ಕಂಡಿದೆ. ವಿಶ್ವದಲ್ಲಿ 5000 ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಆದರೆ, ಅವುಗಳಲ್ಲಿ ಕೇವಲ 45 ಚಲನಚಿತ್ರೋತ್ಸವಗಳಿಗೆ ಅಂತರರಾಷ್ಟ್ರೀಯ ಮಾನ್ಯತೆ ದೊರೆತಿದೆ. ಇದೀಗ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಅಂತರರಾಷ್ಟ್ರೀಯ ಮಾನ್ಯತೆ ದೊರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಒಂದು ವೇಳೆ  ಮಾನ್ಯತೆ ದೊರೆತಲ್ಲಿ ಇದು ವಿಶ್ವದಲ್ಲಿ 46ನೇ ಮಾನ್ಯತೆ ಪಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತದೆ. ಆದ್ದರಿಂದ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವವನ್ನು ಆಯೋಜಿಸಲು ಸಮ್ಮತಿ ನೀಡುವಂತೆಯೂ ಹಾಗೂ ಅದಕ್ಕೆ ಅಗತ್ಯ ಅನುದಾನವನ್ನು ದೊರಕಿಸಿಕೊಡುವಂತೆಯೂ ನಿಯೋಗವು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಇದನ್ನೂ ಓದಿ:  ದೆಹಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ

ಇದನ್ನೂ ಓದಿ:  ಮತ್ತೂಂದು ಪ್ಯಾನ್‌ ಇಂಡಿಯಾ ಸಿನಿಮಾದತ್ತ ಹೊಂಬಾಳೆ ಫಿಲಂಸ್‌

ಭಾರತದಲ್ಲಿ ಕೇವಲ ನಾಲ್ಕು ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಗೋವಾದಲ್ಲಿ ಭಾರತ ಸರ್ಕಾರ ಚಲನಚಿತ್ರೋತ್ಸವವನ್ನು ಆಯೋಜಿಸುತ್ತದೆ. ಉಳಿದಂತೆ ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಕೇರಳ ರಾಜ್ಯ ಸರ್ಕಾರಗಳು ಚಲನನಚಿತ್ರೋತ್ಸವಗಳನ್ನು ಆಯೋಜಿಸುತ್ತಿವೆ ಎಂಬ ಅಂಶವನ್ನು ನಿಯೋಗವು ಮುಖ್ಯಮಂತ್ರಿಯವರ ಗಮನಕ್ಕೆ ತಂದಿತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜಯರಾಜ್, ಕಲಾನಿರ್ದೇಶಕ ಎನ್. ವಿದ್ಯಾಶಂಕರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಹಾಗೂ ಹೆಸರಾಂತ ಚಿತ್ರನಟಿ ಶ್ರೀಮತಿ ಶೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ಹಿರಿಯ ಪತ್ರಕರ್ತ ಮತ್ತು ಚಿತ್ರ ವಿಮರ್ಶಕ ಮುರಳೀಧರ್ ಖಜಾನೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ಜಿ.ಹಿಮಂತರಾಜು ಅವರು ಈ ನಿಯೋಗದಲ್ಲಿದ್ದರು.

ಇದನ್ನೂ ಓದಿ: ಸಚಿನ್ ದಾಖಲೆಯನ್ನು ಮುರಿಯಲು ವಿರಾಟ್ ಸಜ್ಜು: ಮೈಲಿಗಲ್ಲು ಸೃಷ್ಟಿಸಲಿದ್ದಾರ ಕಿಂಗ್ ಕೊಹ್ಲಿ !

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.