ಪೌರ ಕಾರ್ಮಿಕರ ಸೇವೆ ಖಾಯಂ ಪರಿಶೀಲನೆ: ಸಿಎಂ ಭರವಸೆ
Team Udayavani, Mar 14, 2022, 10:45 PM IST
ಬೆಂಗಳೂರು: ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ವಿಚಾರ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸರಕಾರ ಸ್ಪಂದಿಸಲಿದೆ. ನಮ್ಮ ಬಜೆಟ್ನಲ್ಲೂ ಪೌರ ಕಾರ್ಮಿಕರಿಗೆ ಎರಡು ಸಾವಿರ ರೂ. ನೀಡುವುದಾಗಿ ಘೋಷಿಸಲಾಗಿದೆ ಎಂದು ತಿಳಿಸಿದರು. ಸೇವೆ ಖಾಯಂ ಕುರಿತು ಕಾನೂನು, ಆರ್ಥಿಕ ಇಲಾಖೆ ಜತೆ ಚರ್ಚಿಸಿ ಏನೆಲ್ಲ ಸಾಧ್ಯವೋ ಆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
1,600 ಮಂದಿ ಮಾತ್ರ ಖಾಯಂ
ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು, ಪೌರ ಕಾರ್ಮಿಕರು ತಮ್ಮ ಬೇಡಿಕೆಗಳಿಗೆ ಹೋರಾಟ ಮಾಡುತ್ತಿರುವುದನ್ನು ಪ್ರಸ್ತಾವಿಸಿ ಸೇವೆ ಖಾಯಂ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು. 18 ಸಾವಿರ ಪೌರ ಕಾರ್ಮಿಕರಿದ್ದು ಆ ಪೈಕಿ 1,600 ಮಂದಿ ಮಾತ್ರ ಖಾಯಂಗೊಂಡಿದ್ದಾರೆ. ಉಳಿದವರಿಗೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ 7,700 ರೂ. ಇದ್ದ ವೇತನ 17 ಸಾವಿರ ರೂ.ಗೆ ಏರಿಸಿದ್ದೆ. ಅವರ ಬಹುತೇಕ ಬೇಡಿಕೆಗಳು ನ್ಯಾಯಯುತವಾಗಿವೆ ಎಂದು ಹೇಳಿದರು.
ಇದನ್ನೂ ಓದಿ:ಕಾಂಗ್ರೆಸ್ ನಲ್ಲಿ ಪದಾಧಿಕಾರಿ ಬೆಂಕಿ;ಪ್ರಮುಖ ನಾಯಕರ ಜತೆ ಚರ್ಚಿಸದೇ ಪಟ್ಟಿ ಒಯ್ದರೇ ಡಿಕೆಶಿ ?
ಮಾನವೀಯತೆ ಇರಲಿ
ಬಿಜೆಪಿಯ ಪಿ. ರಾಜೀವ್ ಮಾತನಾಡಿ, ನಗರಾಭಿವೃದ್ಧಿ, ಪೌರಾಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಗಳ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಲು ಬರಲಿದ್ದು ಸರಕಾರ ಈ ವಿಚಾರದಲ್ಲಿ ಮಾನವೀಯತೆಯಿಂದ ಕ್ರಮ ಕೈಗೊಳ್ಳಬೇಕು ಎಂದ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು
Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ