ಮುಸ್ಲಿಂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಭೆ
Team Udayavani, Feb 3, 2018, 9:24 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಮುಸಲ್ಮಾನರ ಓಲೈಕೆಗೆ ಆಡಳಿತಾರೂಢ ಕಾಂಗ್ರೆಸ್ ಮುಂದಾಗಿದ್ದು ಸಿಎಂ ಸಿದ್ದರಾಮಯ್ಯ ಗುರುವಾರ ಮುಸ್ಲಿಂ ಧಾರ್ಮಿಕ ಮುಖಂಡರ ಜತೆ ಸಮಾಲೋಚನೆ ನಡೆಸಿದ್ದಾರೆ. ಸಚಿವ ಯು.ಟಿ.ಖಾದರ್ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ದು ಅಲ್ಲಿ ಧಾರ್ಮಿಕ ಮುಖಂಡರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹಮದ್ ಸಹ ಹಾಜರಿದ್ದರು ಎನ್ನಲಾಗಿದೆ. ಸರ್ಕಾರವೇ ನಡೆಸಿರುವ ಆರ್ಥಿಕ ಹಾಗೂ ಸಾಮಾಜಿಕ ಗಣತಿಯಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ 2ನೇ ಸ್ಥಾನದಲ್ಲಿದ್ದು ಅದಕ್ಕೆ ತಕ್ಕಂತೆ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಬೇಕು ಎಂದು ಇದೇ ವೇಳೆ ಮುಸ್ಲಿಂ ಧಾರ್ಮಿಕ ಮುಖಂಡರು ಮುಖ್ಯಮಂತ್ರಿಯಲ್ಲಿ ಮನವಿ ಮಾಡಿದರು ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಮೊದಲಿನಿಂದಲೂ ಮುಸ್ಲಿಂ ಸಮುದಾಯಕ್ಕೂ ಆದ್ಯತೆ ನೀಡುತ್ತದೆ ಎಂದು ಸಿಎಂ ಭರವಸೆ ನೀಡಿದರು. ಮುಸ್ಲಿಂ ಸಮುದಾಯ ಜೆಡಿಎಸ್ ಕಡೆ ಹೋಗದಂತೆ ಧಾರ್ಮಿಕ ಮುಖಂಡರ ಮೂಲಕ ತಡೆಯುವ ಪ್ರಯತ್ನ ಇದು ಎಂದು ಹೇಳಲಾಗಿದೆ. ಜತೆಗೆ, ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹಮದ್ಗೆ ಹೆಚ್ಚು ಆದ್ಯತೆ ನೀಡಿ ಪಕ್ಷದಲ್ಲಿರುವ ಮುಸ್ಲಿಂ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ತನ್ವೀರ್ ಸೇsಠ್ ಸೇರಿ ಇತರೆ ನಾಯಕರು ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ, ಅವರನ್ನು ಸಮಾಧಾನಪಡಿಸಲು ಧಾರ್ಮಿಕ ಮುಖಂಡರ ಸಭೆ ನಡೆಸಲು ಸೂಚಿಸಿ ಪಾಲ್ಗೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ