ಸಚಿವಾಲಯದ ಸಿಬ್ಬಂದಿ ಕಡ್ಡಾಯ ಹಾಜರಿಗೆ ಮುಖ್ಯ ಕಾರ್ಯದರ್ಶಿ ಸೂಚನೆ
Team Udayavani, May 27, 2022, 6:37 AM IST
ಬೆಂಗಳೂರು: ಇಂದು (ಮೇ 27, ಶುಕ್ರವಾರ ) ಸಚಿವಾಲಯ ನೌಕರರ ಸಂಘದವರು ರಾಜ್ಯ ಸರ್ಕಾರದ ನೌಕರರ ವಿರೋಧಿ ನೀತಿ ಖಂಡಿಸಿ ಒಂದು ದಿನ ಕಚೇರಿಗೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಈ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಶುಕ್ರವಾ ಸಚಿವಾಲಯದ ಸಿಬ್ಬಂದಿ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೂಚಿಸಿದ್ದಾರೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು, ಸಚಿವಾಲಯದ ನೌಕರರ ಸಂಘದವರು ವಿವಿಧ ಬೇಡಿಕೆಗಳಿಗೆ ಬಂದ್‌ಗೆ ಕರೆ ನೀಡಿರುವುದು ಕಾನೂನು ಬಾಹಿರವಾಗಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸಚಿವಾಲಯದ ಎಲ್ಲ ಸಿಬ್ಬಂದಿ ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಒಂದು ವೇಳೆ ಸಚಿವಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳು ಮೇಲಾಧಿಕಾರಿಗಳ ಅನುಮತಿ ಪಡೆಯದೇ ಗೈರು ಹಾಜರಾದರೆ ಅದನ್ನು ಲೆಕ್ಕಕ್ಕಿಲ್ಲದ ಅವಧಿ ಎಂದು ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೇ ಶುಕ್ರವಾರ ಕಚೇರಿಗೆ ಹಾಜರಾಗಲು ಬರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಡ್ಡಿ ಪಡಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪದವಿ ಕಾಲೇಜು ಶುಲ್ಕ ನಿಗದಿ ಮಾಡಿದ ಕಾಲೇಜು ಶಿಕ್ಷಣ ಇಲಾಖೆ
ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ ರಾಜಭವನ ಮುತ್ತಿಗೆಗೆ ಯುವ ಕಾಂಗ್ರೆಸ್ ಯತ್ನ
ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ ಸೇವೆ 6ರಿಂದ 5 ವರ್ಷಕ್ಕೆ ಇಳಿಕೆ: ಡಿಸಿಪಿ ನಿಶಾ ಜೇಮ್ಸ್
ರಾಜ್ಯದಲ್ಲಿಂದು 816 ಕೋವಿಡ್ ಪಾಸಿಟಿವ್ : ಸಕ್ರಿಯ ಪ್ರಕರಣ 5,180
ಹೊಸಪೇಟೆ: ಏಕಾಏಕಿ ಹೊತ್ತಿ ಉರಿದ ಕಾರು ; ಪ್ರಯಾಣಿಕರು ಪಾರು