ಮಕ್ಕಳಿಗಾಗಿ ಮಕ್ಕಳ ಹಕ್ಕುಗಳು’ ಪಠ್ಯ ಪುಸ್ತಕ ಸಿದ್ಧ

Team Udayavani, Feb 13, 2019, 1:20 AM IST

107.jpg

 ಕಲಬುರಗಿ: ಮಕ್ಕಳಿಗಾಗಿ ಇರುವ ಹಕ್ಕುಗಳನ್ನು ಶಾಲಾ ಮಟ್ಟದಲ್ಲೇ ಮನದಟ್ಟು ಮಾಡಿಕೊಡಬೇಕು ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಮತ್ತಷ್ಟು ಅರಿವು ಮೂಡಿಸಬೇಕೆಂಬ ನಿಟ್ಟಿನಲ್ಲಿ ಪಠ್ಯ ಪುಸ್ತಕವೊಂದು ಸಿದ್ಧವಾಗಿದೆ.

ಮಕ್ಕಳ ಹಕ್ಕುಗಳು ಎಂದರೇನು? ಮಕ್ಕಳ ಹಕ್ಕುಗಳು ಯಾವವು? ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗಿರುವ ಮಕ್ಕಳ ಹಕ್ಕುಗಳ ಒಡಂಬಡಿಕೆ ಏನು? ಮಕ್ಕಳು ತಮ್ಮ ಹಕ್ಕು ಪಡೆಯುವುದು ಹೇಗೆ? ಮಕ್ಕಳ ಹಕ್ಕುಗಳ ರಕ್ಷಣೆಗಿರುವ ಕಾನೂನುಗಳು ಯಾವುವು? ಹೀಗೆ ಮಕ್ಕಳ ಹಕ್ಕುಗಳ ಬಗೆಗಿನ ಅಂಶಗಳ ಕುರಿತು ಮಕ್ಕಳಿಗೆ ಸುಲಭವಾಗಿ ಅರ್ಥೈಸಿಕೊಳ್ಳುವ ರೀತಿಯಲ್ಲಿ “ಮಕ್ಕಳಿಗಾಗಿ ಮಕ್ಕಳ ಹಕ್ಕುಗಳು’ ಎನ್ನುವ ಪಠ್ಯ ಪುಸ್ತಕ ಮುದ್ರಣಗೊಂಡಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುನಿಸೆಫ್‌, ಬೆಂಗಳೂರಿನ ಬ್ರೆಡ್ಸ್‌ ಸಂಸ್ಥೆ ಸಹಯೋಗದಲ್ಲಿ ಪಠ್ಯ ಪುಸ್ತಕ ಹೊರತರಲಾಗಿದೆ. ಈಗಾಗಲೇ ನಾಲ್ಕು ಸಾವಿರ ಪುಸ್ತಕ ಮುದ್ರಿಸಲಾಗಿದೆ. ಬೆಂಗಳೂರು, ಕಲಬುರಗಿ ಸೇರಿ ಇತರ ಭಾಗಗಳಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯೇತರ ಚಟುವಟಿಕೆಯಾಗಿ ಮಕ್ಕಳ ಹಕ್ಕುಗಳ ಬಗ್ಗೆ ಮನನ ಮಾಡಿಸುವ ಉದ್ದೇಶದಿಂದ ಈ ಪಠ್ಯ ಪುಸ್ತಕ ರೂಪಿಸಲಾಗಿದೆ. 6ನೇ ತರಗತಿಯಿಂದ ಸಮಾಜ ವಿಜ್ಞಾನ ವಿಷಯದೊಂದಿಗೆ ವಾರದಲ್ಲಿ ಒಂದು ದಿನ ಮಕ್ಕಳ ಹಕ್ಕುಗಳ ಬಗ್ಗೆ ಬೋಧಿಸುವಂತೆ ಆಗಬೇಕೆಂಬ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

“ಮಕ್ಕಳಿಗಾಗಿ ಮಕ್ಕಳ ಹಕ್ಕುಗಳು’ ಪುಸ್ತಕವು ಮಕ್ಕಳ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪಠ್ಯೇತರವಾಗಿ ತಿಳಿಸಿಕೊಡುವ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಸಂಘ- ಸಂಸ್ಥೆ ಗಳು, ಸಾಮಾಜಿಕ ಕಾರ್ಯಕರ್ತರು, ಮಕ್ಕಳ ಬಗ್ಗೆ ಕಾಳಜಿಯುಳ್ಳ ಶಿಕ್ಷಕರು ಸೇರಿ ಪ್ರತಿಯೊಬ್ಬರಿಗೂ ಸಹಕಾರಿಯಾಗುವ ಸಮಗ್ರ ಮಾಹಿತಿ ಒಳಗೊಂಡಿದೆ ಎನ್ನುತ್ತಾರೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ವೈ.ಮರಿಸ್ವಾಮಿ.

ಪುಸ್ತಕದಲ್ಲಿ ಏನಿದೆ?: ಮಕ್ಕಳ ಹಕ್ಕಗಳ ಬಗ್ಗೆ ತಿಳಿಸಿ ಕೊಡುವ ಸಂಪೂರ್ಣ ಮಾಹಿತಿ ಒಳಗೊಂಡ ಒಟ್ಟು 63 ಪುಟಗಳ ಪುಸ್ತಕ ಇದಾಗಿದೆ. ಜಾಗತಿಕ ಮಕ್ಕಳ ಹಕ್ಕುಗಳ ಒಡಂಬಡಿಕೆಯಲ್ಲಿ ನಾಲ್ಕು ಗುಂಪುಗಳಾಗಿ ವಿಂಗಡಿಸಿದ “ಬದುಕುವ ಹಕ್ಕು’, “ರಕ್ಷಣೆಯ ಹಕ್ಕು”, “ಅವಕಾಶ ಮತ್ತು ವಿಕಾಸ ಹೊಂದುವ ಹಕ್ಕು’ ಹಾಗೂ “ಭಾಗವಹಿಸುವ ಹಕ್ಕು’ ಬಗ್ಗೆ ಸವಿಸ್ತಾರವಾದ ಮಾಹಿತಿ.

ಮಕ್ಕಳ ಹಕ್ಕುಗಳ ಬಗ್ಗೆ ನಡೆದ ಸಮೀಕ್ಷೆ, ಮಕ್ಕಳ ಸ್ಥಿತಿಗತಿಗಳು, ರಾಜ್ಯಕ್ಕೆ ಸಂಬಂಧಿಸಿದ ಕೆಲವು ಸಂಗತಿಗಳು, ಆಘಾತಕಾರಿ ಅಂಶಗಳು, ಸಂವಿಧಾನದಲ್ಲಿ ಮಕ್ಕಳ ಹಿತದೃಷ್ಟಿಗಾಗಿ ಒತ್ತುಕೊಟ್ಟಿರುವ ಪರಿಚ್ಛೇಧಗಳು, ಮಕ್ಕಳ ಹಕ್ಕುಗಳ ಜಾರಿಯಲ್ಲಿ ಜನಪ್ರತಿನಿಧಿಗಳ ಪಾತ್ರ ಹಾಗೂ ಪೋಷಕರು, ಜಿಲ್ಲಾಡಳಿತ, ಜಿಪಂ, ತಾಪಂ, ಗ್ರಾಪಂ, ಯುವಕರ ಸಂಘಗಳು, ಸ್ವ-ಸಹಾಯ ಸಂಘಗಳು, ಎಸ್‌ಡಿಎಂಸಿ ಸದಸ್ಯರ ಜವಾಬ್ದಾರಿಗಳನ್ನು ವಿವರಿಸಲಾಗಿದೆ.

ಮುಖ್ಯವಾಗಿ ಮಕ್ಕಳು ಆಸಕ್ತಿದಾಯಕವಾಗಿ ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಲು ಗದ್ಯ ಮತ್ತು ಪದ್ಯ ರೂಪದಲ್ಲಿ ನಾಲ್ಕು ಭಾಗಗಳಾಗಿ ತಲಾ ಮೂರು ಅಧ್ಯಾಯಗಳು. ಮಕ್ಕಳನ್ನು ಆಕರ್ಷಿಸುವಂತೆ ಹಾಗೂ ಪಠ್ಯದ ವಿವರಣೆಗೆ ಬೇಕಾದ ಚಿತ್ರಗಳು ಪುಸ್ತಕದಲ್ಲಿವೆ. ಇನ್ನು, ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಗಳಿವೆ.

ಮಕ್ಕಳ ಹಕ್ಕುಗಳ ರಕ್ಷಣೆ ನಿಟ್ಟಿನಲ್ಲಿ ಬ್ರೆಡ್ಸ್‌ ಸಂಸ್ಥೆ 10 ಜಿಲ್ಲೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಮಕ್ಕಳ ಹಕ್ಕುಗಳ ಜಾಗೃತಿ ಅಭಿಯಾನ (ಕ್ರೀಂ ಯೋಜನೆ) ಮೂಲಕ ಮಕ್ಕಳು, ಶಿಕ್ಷಕರಿಗೆ ತರಬೇತಿ, ಮಕ್ಕಳ ಹಕ್ಕುಗಳ ಕ್ಲಬ್‌ ಸ್ಥಾಪನೆಯಲ್ಲಿ ಸಹಕಾರ ನೀಡುತ್ತಿದೆ. ಸಂಸ್ಥೆಯಿಂದ “ಮಕ್ಕಳಿಗಾಗಿ ಮಕ್ಕಳ ಹಕ್ಕುಗಳು’ ಪುಸ್ತಕವನ್ನು 10ಜಿಲ್ಲೆಗಳಲ್ಲಿ ವಿತರಿಸಲಾಗುವುದು.

● ಜಾಯ್‌ ನೆಡುಂಪೆರೆಂಬಿಲ್‌,
ಕಾರ್ಯಕಾರಿ ನಿರ್ದೇಶಕರು, ಬ್ರೆಡ್ಸ್‌ ಸಂಸ್ಥೆ

ಮಕ್ಕಳ ಬಗ್ಗೆ ಕಾಳಜಿಯುಳ್ಳ ಪ್ರತಿಯೊಬ್ಬರಿಗೂ “ಮಕ್ಕಳಿಗಾಗಿ ಮಕ್ಕಳ ಹಕ್ಕುಗಳು’ ಪುಸ್ತಕ ಉಪ ಯುಕ್ತವಾಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯೇತರ ಚಟುವಟಿಕೆಯಾಗಿ ಮಕ್ಕಳ ಹಕ್ಕುಗಳ ಬಗ್ಗೆ ಈ ಪುಸ್ತಕದ ಮೂಲಕ ತಿಳಿಸಿಕೊಡ ಬೇಕು ಎನ್ನುವ ಉದ್ದೇಶವನ್ನು ಆಯೋಗ ಹೊಂದಿದೆ.
● ವೈ. ಮರಿಸ್ವಾಮಿ, ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ,
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ.

ರಂಗಪ್ಪ ಗಧಾರ 

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.