ಶಾಲೆ- ಕಾಲೇಜು ಆರಂಭದ ಬಗ್ಗೆ ಶೀಘ್ರವೇ ಸ್ಪಷ್ಟ ಮಾಹಿತಿ ಎಂದ ಡಿಸಿಎಂ ಅಶ್ವತ್ಥನಾರಾಯಣ
Team Udayavani, Oct 1, 2020, 4:56 PM IST
ಬೆಂಗಳೂರು: ರಾಜ್ಯದಲ್ಲಿ ಶಾಲಾ- ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿಯನ್ನು ಸರಕಾರ ನೀಡಲಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿ ಯುಜಿಸಿ ಈಗಾಗಲೇ ಮಾರ್ಗಸೂಚಿಯನ್ನು ನೀಡಿದೆ. ಅದರಂತೆ ಸರಕಾರ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಅವರ ಜತೆಗೂ ಚರ್ಚೆ ನಡೆಸಿದ ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು ಎಂದರು.
ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಅದರ ಮುಂದುವರೆದ ಭಾಗವಾಗಿ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಎಂದಿನಿಂದ ಹಾಜರಾಗಬೇಕು ಎಂಬ ಬಗ್ಗೆ ಸಂಬಂಧಿತರ ಜತೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಇದನ್ನೂ ಓದಿ:ರಾಜ್ಯದಲ್ಲಿ ಸದ್ಯಕ್ಕೆ ತರಾತುರಿಯಲ್ಲಿ ಶಾಲೆ ಆರಂಭ ಮಾಡಲ್ಲ: ಸಚಿವ ಸುರೇಶ್ ಕುಮಾರ್
ಕೋವಿಡ್ ಮಾರ್ಗಸೂಚಿಯ ಪ್ರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವೆಲ್ಲವುಗಳ ಸಾಧಕ- ಬಾಧಕಗಳನ್ನು ನೋಡಿಕೊಂಡೇ ತರಗತಿಗಳನ್ನು ಆರಂಭ ಮಾಡಲಾಗುವುದು ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…