ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಸಿದ್ದನಿದ್ದೇನೆ: ಕಾಂಗ್ರೆಸ್ ನಾಯಕರಿಗೆ ಸಿಎಂ ಮನವಿ
Team Udayavani, Jan 13, 2022, 12:43 PM IST
ಬೆಂಗಳೂರು: ಮೇಕೆದಾಟು ಯೋಜನೆಯ ಬಗ್ಗೆ ನಿಮ್ಮೆಲ್ಲರ ವಿಶ್ವಾಸದೊಂದಿಗೆ ಅನುಷ್ಠಾನಕ್ಕಾಗಿ ಬೇಕಾಗಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಿದ್ದನಿದ್ದೇನೆ. ಕೋವಿಡ್ ಸೋಂಕು ಹೆಚ್ಚುತ್ತಿರುವ ಸಮಯದಲ್ಲಿ ಪಾದಯಾತ್ರೆ ಸರಿಯಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.
“ಕೋವಿಡ್ ಮಹಾಮಾರಿಯ ಮೂರನೇ ಅಲೆಯು ತೀವ್ರವಾಗಿ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಜನಜೀವನ ವಿಶೇಷವಾಗಿ ಮಕ್ಕಳ ಮೇಲೆ ದುಷ್ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ಹೆಚ್ಚು ಜನರನ್ನು ಸೇರಿಸಿ ಪಾದಯಾತ್ರೆ ಮುಂತಾದವುಗಳನ್ನು ಮಾಡುವುದು ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸರಿ ಇರುವುದಿಲ್ಲ” ಎಂದಿದ್ದಾರೆ.
ಇದನ್ನೂ ಓದಿ:ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೋವಿಡ್ ಪಾಸಿಟಿವ್!
ಈಗಾಗಲೇ ಉಚ್ಚ ನ್ಯಾಯಾಲಯ ಕೂಡ ಇದರ ಬಗ್ಗೆ ತೀವ್ರವಾದ ಅಂತಹ ಅಭಿಪ್ರಾಯ ನೀಡಿದೆ. ಮತ್ತು ಇದು ಜನಾಭಿಪ್ರಾಯ ಕೂಡ ಆಗಿದೆ. ಹೀಗಾಗಿ ಪಾದಯಾತ್ರೆಯನ್ನು ಮುಂದುವರಿಸುವುದನ್ನು ಕೈಬಿಟ್ಟು ನಾವೆಲ್ಲ ಕೊರೊನಾವನ್ನು ಎದುರಿಸೋಣ. ಮುಂಬರುವ ದಿನಗಳಲ್ಲಿ ಒಂದಾಗಿ ಮೇಕೆದಾಟು ಯೋಜನೆ ಅನುಷ್ಠಾನದ ಕುರಿತು ಕ್ರಮ ಕೈಗೊಳ್ಳೋಣ ಎಂಬ ಮನವಿಯನ್ನು ತಮ್ಮಲ್ಲಿ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಪ್ರತಿಪಕ್ಷ ನಾಯಕರಿಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ
ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಲಭ್ಯ
ಕಾಮೆಡ್ ಕೆ ಫಲಿತಾಂಶ ಪ್ರಕಟ: ಟಾಪ್ 10ರಲ್ಲಿ ರಾಜ್ಯದ ಐವರಿಗೆ ಸ್ಥಾನ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧದ ಎಫ್ಐಆರ್ ರದ್ದತಿಗೆ ನಕಾರ
ಪಿರಿಯಾಪಟ್ಟಣ : ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ