
ಬಿಎಸ್ ವೈ ಪುತ್ರಿ ಪದ್ಮಾವತಿಯವರಿಗೂ ಕೋವಿಡ್ ಪಾಸಿಟಿವ್: ಪುತ್ರ ವಿಜಯೇಂದ್ರ ವರದಿ ನೆಗೆಟಿವ್
Team Udayavani, Aug 3, 2020, 10:17 AM IST

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾದ ನಂತರ ಅವರ ಆಪ್ತ ವಲಯದಲ್ಲಿ ಆತಂಕ ಆರಂಭವಾಗಿದೆ. ಇತ್ತೀಚಿನ ದಿನಗಳಲ್ಲಿ ಸಿಎಂ ಬಿಎಸ್ ವೈ ಅವರನ್ನು ಭೇಟಿಯಾಗಿದ್ದ, ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗ ಸಿಎಂ ಬಿಎಸ್ ವೈ ಅವರ ಕುಟುಂಬಸ್ಥರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪುತ್ರ ವಿಜಯೇಂದ್ರ ಅವರ ವರದಿ ನೆಗೆಟಿವ್ ಆಗಿದ್ದರೆ, ಪುತ್ರಿ ಪದ್ಮಾವತಿ ಅವರಿಗೆ ಪಾಸಿಟಿವ್ ಆಗಿದೆ.
ನಿನ್ನೆ ರಾತ್ರಿ ಸಿಎಂ ಬಿಎಸ್ ವೈ ಟ್ವಿಟ್ ಮಾಡಿ ತಮಗೆ ಕೋವಿಡ್ ಸೋಂಕು ತಾಗಿರುವ ಕುರಿತು ಹೇಳಿಕೊಂಡಿದ್ದರು. ಯಾವುದೇ ಸೋಂಕು ಲಕ್ಷಣಗಳು ಇಲ್ಲದೇ ಇದ್ದರೂ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದಿದ್ದರು.
ರವಿವಾರ ಸಿಎಂ ನಿವಾಸದಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಬಿಎಸ್ ವೈ ಮತ್ತು ಪುತ್ರಿ ಪದ್ಮಾವತಿ ಅವರಿಗೆ ಸೋಂಕು ದೃಢವಾಗಿತ್ತು. ಮಗ ವಿಜಯೇಂದ್ರ, ಅವರ ಆಪ್ತ ಸಹಾಯಕ ಮತ್ತು ಸಿಎಂ ಒಎಸ್ ಡಿ ಮಹಾಂತೇಶ ಅವರ ವರದಿ ನೆಗೆಟಿವ್ ಆಗಿದೆ. ಸಿಎಂ ಮತ್ತು ಪುತ್ರಿ ಪದ್ಮಾವತಿ ಅವರಿಗೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯೇಂದ್ರ ಒಂದು ವಾರ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ.
ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ. ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ. ತಜ್ಞ ವೈದ್ಯರುಗಳು ನಿರಂತರ ನಿಗಾ ವಹಿಸಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಆತಂಕಗೊಳ್ಳಬೇಡಿ, ನೀವಿದ್ದಲ್ಲಿಂದಲೇ ಹಾರೈಸಿ. ನಾನು ಗೃಹ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ.
— Vijayendra Yeddyurappa (@BYVijayendra) August 3, 2020
ಟಾಪ್ ನ್ಯೂಸ್
