ಕಾಂಗ್ರೆಸ್ ಹೋರಾಟಕ್ಕೆ ಸಿಎಂ ತಿರುಗೇಟು: ಗಂಗಾ ಕಲ್ಯಾಣ ಅಕ್ರಮದ ತನಿಖೆ ನಡೆಸುತ್ತೇನೆ; ಸಿಎಂ
Team Udayavani, Sep 14, 2022, 2:20 PM IST
ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ” ತನಿಖಾ ತಿರುಗೇಟು” ನೀಡಿದ್ದಾರೆ.
ಗಂಗಾ ಕಲ್ಯಾಣ ಯೋಜನೆಯಲ್ಲಿ 430 ಕೋಟಿ ರೂ.ಅವ್ಯವಹಾರ ನಡೆದಿದೆ ಎಂದು ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ವಿಷಯ ಪ್ರಸ್ತಾಪಿಸಿದರು. ಆದರೆ ಸರಕಾರ ಸಮರ್ಪಕ ಉತ್ತರ ನೀಡಿಲ್ಲ ಎಂದು ಶಾಸಕರಾದ ಪ್ರಿಯಾಂಕ ಖರ್ಗೆ ,ಯತೀಂದ್ರ ಸಿದ್ದರಾಮಯ್ಯ, ಪ್ರಸಾದ್ ಅಬ್ಬಯ್ಯ, ಭೀಮಾ ನಾಯಕ್ ಹಾಗೂ ಉಳಿದ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಕಲಾಪದ ಬಳಿಕ ಸಭೆ ನಡೆಸೋಣ ಎಂದರೂ ಪ್ರತಿಭಟನೆ ಹಿಂಪಡೆಯಲಿಲ್ಲ.
ಇದನ್ನೂ ಓದಿ: ಹಿಂದಿ ದಿವಸ್ ಸದ್ದು ಗದ್ದಲ: ಹುಚ್ಚಾಸ್ಪತ್ರೆಯಲ್ಲಿ ಮಾತನಾಡಿದಂತೆ ಮಾತಾಡ್ತೀರಾ?: ಸ್ಪೀಕರ್
ಈ ವಿಚಾರವನ್ನು ಕಾಂಗ್ರೆಸ್ ಸದನದ ಹೊರಗೆ ಅಸ್ತ್ರವಾಗಿ ಬಳಸಬಹುದೆಂಬುದನ್ನು ಮನಗಂಡ ಸಿಎಂ ಬೊಮ್ಮಾಯಿ, ತಕ್ಷಣ ಈ ವಿಚಾರವನ್ನು ತನಿಖೆಗೆ ಒಪ್ಪಿಸುತ್ತೇನೆ. 2018 ರಿಂದ ಇಲ್ಲಿಯವರೆಗೆ ನಡೆದ ಎಲ್ಲ ಪ್ರಕರಣವನ್ನು ತನಿಖೆಗೆ ಒಪ್ಪಿಸುತ್ತೇವೆ ಎಂದಾಗ ಕಾಂಗ್ರೆಸ್ ಪ್ರತಿಭಟನೆ ವಾಪಾಸ್ ಪಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು