ದೂರದೃಷ್ಟಿ ಇಟ್ಟುಕೊಂಡು ಸಮರ್ಥವಾಗಿ ವಿದ್ಯುತ್ ನಿರ್ವಹಣೆ ಮಾಡಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

Team Udayavani, Aug 11, 2021, 4:36 PM IST

CM Basavaraja Bommai Instruct to Officers

ಬೆಂಗಳೂರು : ವಿದ್ಯುತ್ ಕ್ಷೇತ್ರದಲ್ಲಿ ಸಾವಲಂಬಿ ಆಗುವುದರ ಜೊತೆಗೆ ಸಮರ್ಥವಾಗಿ ವಿದ್ಯುತ್ ನಿರ್ವಹಣೆಯನ್ನು ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದರು.‌

ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.

ವಿದ್ಯುತ್ ಉತ್ಪಾದನೆ ಮತ್ತು ನಿರ್ವಹಣೆ ಇನ್ನು ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ ವಿದ್ಯುತ್ತನ್ನು ಮಾರಾಟ ಮಾಡುವಂತಾಗಬೇಕು. ಕರ್ನಾಟಕ ವಿದ್ಯುತ್ ನಿಗಮದಿಂದ ವಿದ್ಯುತ್ ಉತ್ಪಾದನೆ ಅತ್ಯಂತ ದಕ್ಷತೆಯಿಂದ ಆಗಬೇಕು. ಜಲ ಮತ್ತು ವಿದ್ಯುತ್ ಘಟಕಗಳು ಅತಿ ಹೆಚ್ಚು ಕಾರ್ಯ ಕ್ಷಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ : ಸಿಂಗ್ ಖಾತೆ ಬದಲಾವಣೆಯ ಬಗ್ಗೆ ವರಿಷ್ಠರಿಂದ ಯಾವುದೇ ಸೂಚನೆ  ಬಂದಿಲ್ಲ : ಬೊಮ್ಮಾಯಿ

ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಿಸಲಾಗಿರುವ ಬೋರ್ ವೆಲ್ ಗಳಿಗೆ ಯಾವುದೇ ರೀತಿಯ ತಡ ಮಾಡದೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕೋವಿಡ್ ಸಂದರ್ಭದಲ್ಲಿ ವಿಶೇಷವಾಗಿ ಆಸ್ಪತ್ರೆಗಳಿಗೆ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯದ  15 ಜಿಲ್ಲೆಗಳ  ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ 7 ಗಂಟೆಗಳ ವಿದ್ಯುತ್ ಪೂರೈಕೆಯಾಗುತ್ತಿದ್ದು, ಉಳಿದ ಜಿಲ್ಲೆಗಳಲ್ಲಿ 5 ಗಂಟೆಗಳ ವಿದ್ಯುತ್ ಪೂರೈಕೆಯೂ ಸರಿಯಾಗಿ ಆಗುತ್ತಿಲ್ಲ. ಈ ಅಸಮಾನತೆಯನ್ನು ಹೋಗಲಾಡಿಸಲು ನೀಲನಕ್ಷೆಯನ್ನು ಸಿದ್ಧಪಡಿಸಿ ಕಾಲಮಿತಿಯಲ್ಲಿ  ಯೋಜನಾಬದ್ಧವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.

ವಿದ್ಯುತ್ ಸೋರಿಕೆಯನ್ನು ತಡೆಗಟ್ಟಿ ಒಟ್ಟಾರೆ ಇಂಧನ ವ್ಯವಸ್ಥೆಯ ಸುಧಾರಣೆಗೆ ಒತ್ತು ನೀಡಬೇಕು. ರಾಜ್ಯದಲ್ಲಿ ನವೀಕೃತ ಮೂಲಗಳ ಸ್ಥಾಪಿತ ಸಾಮರ್ಥ್ಯ 15184.13 ಮೆ. ವ್ಯಾಟ್.ಗಳಿದ್ದು ದೇಶದಲ್ಲಿಯೇ ಕರ್ನಾಟಕ ಮುಂಚೂಣಿಯಲ್ಲಿದೆ. ಭವಿಷ್ಯದ ದೃಷ್ಟಿಯಿಂದ ನವೀಕೃತ ಇಂಧನಕ್ಕೆ ಆದ್ಯತೆ ನೀಡುವಂತೆ  ಸಲಹೆ ನೀಡಿದರು.‌

ಗಂಗಾ ಕಲ್ಯಾಣ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಲ್ಲಾ ಅಭಿವೃದ್ಧಿ ನಿಗಮಗಳು ಸೇರಿದಂತೆ ಒಟ್ಟು 18569 ಕೊಳವೆಬಾವಿಗಳ ವಿದ್ಯುದೀಕರಣಗೊಳಿಸುವ ಗುರಿ ಇದೆ. ಇದಕ್ಕಾಗಿ ಪ್ರತಿ ಪಂಪ್ ಸೆಟ್ ವಿದ್ಯುದೀಕರಣಕ್ಕೆ ಬಿಡುಗಡೆ ಮಾಡುವ 50 ಸಾವಿರ ರೂ.ಗಳ ವೆಚ್ಚವನ್ನು 1.2 ಲಕ್ಷಕ್ಕೆ  ಹೆಚ್ಚಿಸುವ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್,  ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್.ಮಂಜುಳಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಣೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.