ಭಾರತ ಜಾಗತಿಕ ನಾಯಕವಾಗಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ: ಸಿಎಂ ಬೊಮ್ಮಾಯಿ

Team Udayavani, Feb 13, 2023, 11:47 AM IST

CM Basavraj Bommai in Aero India show

ಬೆಂಗಳೂರು: ಭಾರತವನ್ನು ಜಾಗತಿಕ ನಾಯಕವಾಗಿಸಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಚಾಲನೆಗೊಂಡ    ಏರೋ ಇಂಡಿಯಾ ಶೋ 2023 ಕಾರ್ಯಕ್ರಮದಲ್ಲಿ ಪ್ರಧಾನಿಗಳೊಂದಿಗೆ ಪಾಲ್ಗೊಂಡು ಮಾತನಾಡಿದರು.

ಈ ಕಾರ್ಯಸಾಧನೆಗೆ ಪ್ರಧಾನಿಗಳ ಆಶಯದಂತೆ ಕರ್ನಾಟಕ ಆರ್ಥಿಕತೆ, ಸಾಮಾಜಿಕ ವ್ಯವಸ್ಥೆ ಹಾಗೂ ರಕ್ಷಣಾ ವಲಯದಲ್ಲಿ ಕೊಡುಗೆ ನೀಡಲಿದೆ. ಏರೋ ಇಂಡಿಯಾ ಶೋ 14ನೇ ಆವೃತ್ತಿಯು ಗಾತ್ರ, ಪ್ರದರ್ಶನ ಮತ್ತು ಕಾರ್ಯವೈಖರಿಯ ದೃಷ್ಟಿಯಿಂದ ಅತ್ಯಂತ ವಿಶೇಷ ಆವೃತ್ತಿಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ ಅತಿ ದೊಡ್ಡ ಏರ್ ಶೋ ಆಗಿದೆ. ರಕ್ಷಣಾ ವಲಯ ಹಾಗೂ ಏರ್ ಶೋ ಪ್ರದರ್ಶನದಲ್ಲಿ ಭಾರತ ತನ್ನ ಸಾಮರ್ಥ್ಯವನ್ನು ನಿರೂಪಿಸಿದೆ. ಕೋವಿಡ್ ಸಂದರ್ಭದಲ್ಲಿ ಪ್ಯಾರಿಸ್ ಏರ್ ಶೋ ನಡೆಯದಿದ್ದಾಗ, ನಮ್ಮ ಏರ್ ಶೋ ಯಶಸ್ವಿಯಾಗಿ ಜರುಗಿತು. ಈ ಬಾರಿ ವಸ್ತು ಪ್ರದರ್ಶನದ ವಿಸ್ತೀರ್ಣ, ಪ್ರದರ್ಶಕರ ಸಂಖ್ಯೆಯೂ ಹೆಚ್ಚಾಗಿದೆ ಎಂದರು.

ಕರ್ನಾಟಕ ಹಿಂತಿರುಗಿ ನೋಡಿಲ್ಲ: ಕರ್ನಾಟಕದಲ್ಲಿ 1940 ರಲ್ಲಿ ಎಚ್.ಎ.ಎಲ್, 1950 ರಲ್ಲಿ ಬಿ.ಎಚ್.ಇ.ಎಲ್, ಬಿ.ಇ.ಎಲ್, ಡಿ.ಆರ್.ಡಿ.ಒ ಸ್ಥಾಪನೆಗೊಂಡವು. 1960 ರಲ್ಲಿ ಇಸ್ರೋ ಕಾರ್ಯಾರಂಭ ಮಾಡಿದರೆ, 1970 ರಲಿ ಮೊದಲ ಸ್ಯಾಟಲೈಟ್ ಆರ್ಯಭಟ ಉಪಗ್ರಹವನ್ನು ಬೆಂಗಳೂರಿನಲ್ಲಿ ತಯಾರಿಸಲಾಯಿತು. ಅಲ್ಲಿಂದ ನಾವು ಹಿಂತಿರುಗಿ ನೋಡಿಲ್ಲ. ಈಗ ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ರಕ್ಷಣಾ ವಲಯದ ಶೇ 65 ಉತ್ಪಾದನೆ ಬೆಂಗಳೂರಿನಲ್ಲಿ ಆಗುತ್ತಿದೆ ಎಂದರು.

45 ಸಾವಿರಕ್ಕೂ ಹೆಚ್ಚು ಯುವಕರ ಬಳಕೆ: ರಾಜ್ಯದಲ್ಲಿ ಏರೋಸ್ಪೇಸ್ ಹಾಗೂ ರಕ್ಷಣಾ ನೀತಿಯು ಜಾರಿಯಲ್ಲಿದ್ದು,  ರಕ್ಷಣಾ ಹಾಗೂ ಏರೋಸ್ಪೇಸ್ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸಲು 45 ಸಾವಿರಕ್ಕೂ ಹೆಚ್ಚು ಯುವಕರನ್ನು ತೊಡಗಿಸಿಕೊಳ್ಳಲಾಗುವುದು ಎಂದರು.

ಕರ್ನಾಟಕ 14 ನೇ ಏರೋ ಶೋ ಆಯೋಜಿಸಲು ಅವಕಾಶ ಮಾಡಿಕೊಟ್ಟಿರುವ ಪ್ರಧಾನಿಗಳು ಹಾಗೂ ರಕ್ಷಣಾ ಸಚಿವರಿಗೆ  ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದರು. ರಕ್ಷಣಾ ವಲಯದ ಶಕ್ತಿ ಹಾಗೂ ಸಾಮರ್ಥ್ಯ ವೃದ್ಧಿಗೆ ಕರ್ನಾಟಕ ತನ್ನ ಕೊಡುಗೆಯನ್ನು ನಿರಂತರವಾಗಿ ನೀಡಲಿದೆ ಎಂದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.