ಶಿಕ್ಷಣ, ಕೌಶಲ್ಯ ಕುರಿತ ಏಷ್ಯಾ ಮಟ್ಟದ ಶೃಂಗಸಭೆಗೆ ಸಿಎಂ ಬೊಮ್ಮಾಯಿ ಚಾಲನೆ

'ಬೆಂಗಳೂರು ಘೋಷಣೆ' ಕೊಟ್ಟರೆ ಜಾರಿಗೆ ಬದ್ಧ

Team Udayavani, Sep 21, 2022, 5:20 PM IST

1-sddsdada

ಬೆಂಗಳೂರು: ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕುರಿತ ಡೈಡ್ಯಾಕ್ಟಿಕ್ ಶೃಂಗಸಭೆಯು ತನ್ನ ವರದಿಯನ್ನು “ಬೆಂಗಳೂರು ಘೋಷಣೆ’ ಎನ್ನುವ ಹೆಸರಿನಲ್ಲಿ ಹೊರತರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂಡಿಯಾ ಡೈಡ್ಯಾಕ್ಟಿಕ್ ಅಸೋಸಿಯೇಷನ್ ಇಲ್ಲಿ ಆಯೋಜಿಸಿರುವ ಮೂರು ದಿನಗಳ ಏಷ್ಯಾ ಮಟ್ಟದ ಶೃಂಗಸಭೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿ, ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಈ ಸಮಾವೇಶ ನಡೆಯುತ್ತಿದೆ.ಶೃಂಗಸಭೆಯು ಮುಂದಿನ ಪೀಳಿಗೆಗಳಿಗೆ ಪರಿಹಾರ ಒದಗಿಸುವ ವೇದಿಕೆ ಆಗಬೇಕು. ಇವುಗಳನ್ನು ಜಾರಿಗೊಳಿಸಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಅವರು ಭರವಸೆ ನೀಡಿದರು.

ಶಿಕ್ಷಣ ನೀತಿ, ಕಲಿಸುವ ವಿಧಾನ ಈಗ ಆಮೂಲಾಗ್ರ ಬದಲಾಗಿದೆ. ಬದಲಾವಣೆಯು ಉತ್ತಮ ಶಿಕ್ಷಣ ವ್ಯವಸ್ಥೆ ರೂಪಿಸುವಂತಿರಬೇಕು. ಶೈಕ್ಷಣಿಕ ವ್ಯವಸ್ಥೆ ಸಹಜ ಕಲಿಕೆಗೆ ಪೂರಕವಾಗಿ ಇರಬೇಕು. ನೂತನ ತಂತ್ರಜ್ಞಾನಗಳ ರಚನಾತ್ಮಕ ಬಳಕೆಯ ವಿಧಾನಗಳನ್ನು ರೂಪಿಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿ ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಂಡು, ಅದರಲ್ಲಿ ಯಶಸ್ವಿಯಾಗಲು ಉನ್ನತ ಶಿಕ್ಷಣ ಸಹಕಾರಿಯಾಗಿದೆ. ಪ್ರತಿ ದಿನ ಹೊಸ ಆಪ್ ಗಳು ಬರುತ್ತಿದ್ದರೂ ಪರಿಣಾಮಕಾರಿಯಾಗಿಲ್ಲ ಎಂದು ಪ್ರತಿಪಾದಿಸಿದರು.

ಗುಣಮಟ್ಟದ ಶಿಕ್ಷಣವೇ ಪರಿಹಾರ
ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಮಾತನಾಡಿ, ವಿಶ್ವಸಂಸ್ಥೆ ಹೇಳಿರುವ ಸಮಾನ ಮತ್ತು ಸುಸ್ಥಿರ ಬೆಳವಣಿಗೆಯ ಗುರಿ ಸಾಧಿಸಬೇಕು ಎಂದರೆ ಗುಣಮಟ್ಟದ ಶಿಕ್ಷಣವೊಂದೇ ಅಸ್ತ್ರ ಎಂದರು.

ವ್ಯವಸ್ಥೆಯ ಸಂಕೀರ್ಣತೆಯು ಅನೇಕ ಸಮಸ್ಯೆಗಳನ್ನು ಸೃಷ್ಟಿಸಿದೆ. ಇದನ್ನು ಬಗೆಹರಿಸಲು ರಾಜ್ಯದಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಕ್ರಾಂತಿಕಾರಿ ಸುಧಾರಣೆಗಳನ್ನು ತರಲಾಗುತ್ತಿದೆ ಎಂದರು.

ತಂತ್ರಜ್ಞಾನ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ರಾಜ್ಯ ಎಂದೂ ಹಿಂದುಳಿದಿಲ್ಲ. ಎನ್ಇಪಿ ಜಾರಿ ಮತ್ತು ಕೌಶಲ್ಯಾಭಿವೃದ್ಧಿ ಕಲಿಕೆಯಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ. ಶಿಕ್ಷಣದಲ್ಲಿ ಯುವಜನರ ಭವಿಷ್ಯದ ಜತೆಗೆ ಸಾಮುದಾಯಿಕ ಹಿತವನ್ನು ಗಮನದಲ್ಲಿ ಇಟ್ಟುಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬ್ರೆಜಿಲ್ ಸಹಾಯಕ ಉನ್ನತ ಶಿಕ್ಷಣ ಸಚಿವ ಎಡ್ವರ್ಡೋ ಗೇಮ್ಸ್ ಸಾಲ್ವೆಡೋ, ಸೌದಿ ಅರೇಬಿಯಾದ ಶಿಕ್ಷಣ ಮಹಾನಿರ್ದೇಶಕ ಡಾ.ಅಬ್ದುರ್ ರೆಹಮಾನ್ ಅಲಾಸ್ಮಿ, ವರ್ಲ್ಡ್ ಎಜುಕೇಶನ್ ಫೋರಂನ ನಿರ್ದೇಶಕ ಡಾಮಿನಿಕ್ ಸ್ಯಾವೇಜ್, ಕಾರ್ಯಕ್ರಮ ನಿರ್ದೇಶಕ ಗ್ಯಾವಿನ್ ಡೈಕ್ಸ್ ಸೇರಿದಂತೆ 15 ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಇದ್ದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.