ಕಾಂಗ್ರೆಸ್‌ ನಾಯಕರಿಗೆ ಸಿಎಂ ಬೊಮ್ಮಾಯಿ ತಿರುಗೇಟು

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಇದ್ದಾರೆ

Team Udayavani, Aug 15, 2022, 6:45 AM IST

CMಕಾಂಗ್ರೆಸ್‌ ನಾಯಕರಿಗೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಸರ್ಕಾರದ ಜಾಹೀರಾತಿನಲ್ಲಿ ನೆಹರೂ ಅವರನ್ನು ಕೈಬಿಟ್ಟಿರುವುದಕ್ಕೆ ತಗಾದೆ ತೆಗೆದಿರುವ ಕಾಂಗ್ರೆಸ್‌ಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಾಹೀರಾತಿನಲ್ಲಿ ನೆಹರೂ ಇದ್ದಾರೆ. ಆದರೆ ಕಾಂಗ್ರೆಸ್‌ಗೆ ಯಾಕಿಷ್ಟು ಗಾಬರಿ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಆಯೋಜಿಸಲಾಗಿದ್ದ ದೇಶ ವಿಭಜನೆಯ ದುರಂತ ಘಟನೆಗಳು ಎಂಬ ಪತ್ರಿಕಾ ವರದಿಗಳ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ, ವೀಕ್ಷಣೆ ಮಾಡಿದ ಬಳಿಕ ಅವರು ಮಾತನಾಡಿದರು.

ಕಾಂಗ್ರೆಸ್‌ನವರಿಗೆ ನಾನೊಂದು ಪ್ರಶ್ನೆ ಕೇಳಲು ಬಯಸುತ್ತೇನೆ. ಸಂವಿಧಾನ ಕೊಟ್ಟ ಅಂಬೇಡ್ಕರ್‌ ಅವರನ್ನು ಮರೆಸಿ ಬಿಟ್ಟಿದ್ರಲ್ಲಾ, ಅವರು ಎಲ್ಲೂ ಇಲ್ಲದಂಗೆ ಮಾಡಿದ್ರು. ಆಗ ಇವರಿಗೆ ನೆನಪಾಗಿಲ್ವಾ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಸರ್ದಾರ್‌ ವಲ್ಲಭಾಯ್‌ ಪಟೇಲ್‌ ಅವರನ್ನು ಮರೆಸಿದ್ರು. ಯಾವುದೇ ಒಬ್ಬರಿಂದ ಸ್ವಾತಂತ್ರ್ಯ ಬಂದಿದೆ ಅನ್ನೋ ಪರಿಕಲ್ಪನೆ ತಪ್ಪು. ಅನೇಕ ಜನ ಪ್ರಾಣ ಬಲಿದಾನ ಮಾಡಿದ್ದಾರೆ ಎಂದರು.

75ನೇ ಸ್ವಾತಂತ್ರ್ಯೋತ್ಸವ ಅನಾಮಧೇಯ ಹೋರಾಟಗಾರರಿಗೆ ಮೀಸಲಿಟ್ಟಿದ್ದು, ಎಲ್ಲೇ ಹೋದರೂ ನೆಹರೂ ಹೆಸರು ಇಟ್ಟಿದ್ದೇವೆ. ಜಾಹೀರಾತಿನಲ್ಲೂ ನೆಹರೂ ಇದ್ದಾರೆ. ಆದರೂ ಕಾಂಗ್ರೆಸ್ಸಿಗರಿಗೆ ಯಾಕಿಷ್ಟು ಗಾಬರಿ? ಅಂಬೇಡ್ಕರ್‌, ಭಗತ್‌ ಸಿಂಗ್‌, ಸುಭಾಷ್‌ ಚಂದ್ರಬೋಸ್‌, ಚಂದ್ರಶೇಖರ್‌ ಅಜಾದ್‌ ಇವರಿಗೆ ನೆನಪಾಗಿಲ್ಲ ತಿರುಗೇಟು ನೀಡಿದರು.

ನಿಜವಾದ ಹೋರಾಟಗಾರರ ಸವಿನೆನಪು ಕರ್ನಾಟಕದಲ್ಲಿ ಮಾಡಿಕೊಟ್ಟಿದ್ದೇವೆ. ಅವರಿಗೆ ನಮನ ಸಲ್ಲಿಸಿದ್ದು ಕರ್ನಾಟಕದಲ್ಲಿ ಮಾತ್ರ. ಹಿಂದೆಂದೂ ನೆನಪು ಮಾಡಿಕೊಂಡ ದಾಖಲೆಗಳು ಇಲ್ಲ. ಎಲ್ಲರನ್ನೂ ನೆನಪು ಮಾಡಿಕೊಂಡಿದ್ದೀವಿ, ಅದಕ್ಕೆ ಅಭಿನಂದನೆ ಸಲ್ಲಿಸಬೇಕು. ದಾದಾಬಾಯಿ ನವರೋಜಿ, ಹರ್ಡೇಕರ್‌ ಅವರನ್ನು ನೆನಪು ಮಾಡಿಕೊಂಡಿದ್ದೇವೆ. ಅವರೆಲ್ಲ ಕಾಂಗ್ರೆಸ್‌ನವರೆ. ನಾವೇನು ಭೇದ ಭಾವ ಮಾಡಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಸಿದ್ದು ವಿರುದ್ಧ ಗರಂ: ಅಧಿಕಾರಕ್ಕೋಸ್ಕರ ಬೊಮ್ಮಾಯಿಯವರು ಆರ್‌ಎಸ್‌ಎಸ್‌ನವರ ಹಿಡಿತದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪ್ರಾರಂಭದಲ್ಲಿ ಏಕವಚನದಲ್ಲೇ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಸಿದ್ದರಾಮಯ್ಯ ಆ ಹುಡುಗ ರಾಹುಲ್‌ ಗಾಂಧಿ ಮುಂದೆ ಕೈಕಟ್ಟಿಕೊಂಡು ನಿಂತ ಮೇಲೆ ಅವನದೆಲ್ಲ ಸ್ವಾಭಿಮಾನ ಮುಗಿದುಹೋಯ್ತು. ನಾವೆಲ್ಲ ಸಿದ್ದರಾಮಣ್ಣನ ಬಗ್ಗೆ ಬಹಳಷ್ಟು ಎತ್ತರಕ್ಕಿದ್ವಿ. ಅವನಿಗಿಂತ ಸಣ್ಣವಯಸ್ಸಿನ ರಾಹುಲ್‌ ಗಾಂಧಿ ಮುಂದೆ ದೆಹಲಿಗೆ ಹೋಗಿ ಕೈಕಟ್ಟಿಕೊಂಡು ನಿಲ್ತಾರೆ, ದಿನಗಟ್ಟಲೇ ಕಾಯ್ತಾರೆ ಅವರ ಮೇಲಿದ್ದ ಗೌರವ, ಸ್ವಾಭಿಮಾನ ಅಲ್ಲಿಗೆ ಮುಗಿಯಿತು ಎಂದರು.

ಕರಾಳ ದಿನ ನೋಡಿದಾಗ ಕಣ್ಣಲ್ಲಿ ನೀರು ಬರುತ್ತೆ
ದೇಶ ವಿಭಜನೆಯ ಕರಾಳ ದಿನವನ್ನು ನೋಡಿದಾಗ ಕಣ್ಣಲ್ಲಿ ನೀರು ಬರುತ್ತದೆ. ಪೂರ್ವ ಹಾಗೂ ಪಶ್ಚಿಮ ದೇಶ ವಿಭಜನೆ ಆದಾಗ 10 ಲಕ್ಷ ಜನರು ವಲಸೆ ಆದರು. ದೊಡ್ಡ ಹಿಂಸಾಚಾರ, ಸಾವು-ನೋವು ಆಯಿತು. ಬಹಳಷ್ಟು ಕಡೆ ಹಸಿವಿನಿಂದ ಸತ್ತರು. ಇದು ಯಾಕೆ ಆಯಿತು ಎಂದು ಇತಿಹಾಸದಲ್ಲಿ ದಾಖಲೆ ಇದೆ. ಇದಕ್ಕೆ ಯಾರೆಲ್ಲ ಕಾರಣ ಅಂತಾನೂ ದಾಖಲೆ ಇದೆ. ಇದೊಂದು ದೊಡ್ಡ ದುರಂತ. ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ದೇಶವನ್ನು ಒಡೆಯುವ ಕೆಲಸ ಆಗಿದೆ. ರಕ್ತ ಭೂಮಿಗೆ ಚಲ್ಲಿದ್ದಾರೆ. ಸ್ವಾತಂತ್ರ್ಯ ಸಮಯದಲ್ಲಿ ಪ್ರಾಣ ಹೋಯಿತು. ವಿಭಜನೆ ಸಮಯದಲ್ಲಿ ಪ್ರಾಣ ಹೋಯಿತು. ದೇಶ ಒಂದಾಗಿದ್ದರೆ ಇಂತಹ ಘಟನೆ ತಪ್ಪಿಸಬಹುದಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.