ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಕುರಿತಾಗಿ ಬಸವರಾಜ ಬೊಮ್ಮಾಯಿ ತುರ್ತು ಸಭೆ
Team Udayavani, Aug 1, 2021, 1:08 PM IST
ಬೆಂಗಳೂರು: ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ತುರ್ತು ಸಭೆಯಲ್ಲಿ ಸಿಎಂ ಬೊಮ್ಮಾಯಿ ಅವರು ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ವಿನಯ್ ಗುರೂಜಿ
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಸದ್ಯದ ಪ್ರವಾಹ ಪರಿಸ್ಥಿತಿ ಕುರಿತ ವರದಿಯನ್ನು ಸಿಎಂ ಪಡೆದರು.
ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ಅಗತ್ಯ ಹಣಕಾಸು ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಸಿಎಂ ಬೊಮ್ಮಾಯಿ ಸಭೆಗೂ ಮೊದಲು ತಿಳಿಸಿದರು.