ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

Team Udayavani, Jan 21, 2022, 7:00 AM IST

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಬೆಂಗಳೂರು: ರಾಜ್ಯದಲ್ಲಿ  ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಬೇಕು ಎಂಬ ಒತ್ತಡ ಹೆಚ್ಚಾಗಿರುವ ನಡುವೆಯೇ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆ ಮಹತ್ವ ಪಡೆದುಕೊಂಡಿದೆ.

ಸಭೆಯ ಬಳಿಕ ಹೊಸ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದ್ದು, ವಾರಾಂತ್ಯ ಕರ್ಫ್ಯೂ ಅಂತ್ಯವಾಗುತ್ತದೋ  ಅಥವಾ ಕೆಲವೆಡೆ ಮಾತ್ರ ಇರುತ್ತದೋ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ವಾರಾಂತ್ಯ ಕರ್ಫ್ಯೂ ತೆರವುಗೊಳಿಸಬೇಕು ಎಂದು ಆಡಳಿತಾರೂಢ ಬಿಜೆಪಿಯಲ್ಲೇ ಒತ್ತಡ ಇದೆ. ಜತೆಗೆ ಹೊಟೇಲ್‌, ಕೈಗಾರಿಕೆ ಸೇರಿ ಹಲವು ಉದ್ಯಮಗಳೂ ಇದೇ ಆಗ್ರಹ ಮುಂದಿಟ್ಟಿವೆ.

ರಾಜ್ಯದಲ್ಲಿ ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಒಂದೆಡೆ ಕಟ್ಟುನಿಟ್ಟಿನ ನಿಯಮ ರೂಪಿಸಲಾಗಿದೆ. ಆದರೆ, ಇದರಿಂದ  ಉದ್ಯಮ ಹಾಗೂ ಸೇವಾ ವಲಯಕ್ಕೆ ಭಾರೀ ಸಂಕಷ್ಟ ಎದುರಾಗಿದೆ. ಹೀಗಾಗಿ, ವಾರಾಂತ್ಯ ಕರ್ಫ್ಯೂ ಹಿಂಪಡೆದು ರಾತ್ರಿ  11ರಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ನಿಗದಿ ಮಾಡುವುದು ಸೂಕ್ತ ಎಂಬ ವಾದವೂ ಇದೆ.

ಬೆಂಗಳೂರಿನಲ್ಲಿ ಮುಂದುವರಿಕೆ?:

ರಾಜ್ಯದಲ್ಲಿ ಗುರುವಾರವೂ 47,754 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ ಒಂದೇ ದಿನ 30,540 ಮಂದಿಗೆ ಸೋಂಕು ದೃಢಪಟ್ಟಿದೆ. ರಾಜ್ಯದ   ಪಾಸಿಟಿವಿಟಿ ದರ ಶೇ. 18.48ಕ್ಕೆ ಏರಿದೆ. ಆದರೆ, ಪ್ರಕರಣ ಹೆಚ್ಚಿರುವಂಥ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಮುಂದುವರಿಸಲು ತಜ್ಞರು ಸಲಹೆ ನೀಡಿದ್ದಾರೆ.

ಈ ಮೊದಲು  ಜ.25ರ ಬಳಿಕ ರಾಜ್ಯದಲ್ಲಿ ಪ್ರಕರಣಗಳು ಕಡಿಮೆಯಾಗಬಹುದು ಎಂದು ಅಂದಾಜಿಸ ಲಾಗಿತ್ತು. ಆದರೆ, ಕಳೆದ 2-3 ದಿನಗಳ ಅಂಕಿ-ಸಂಖ್ಯೆ ನೋಡಿದರೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್‌ ಮೊದಲ ವಾರದವರೆಗೂ ಹೆಚ್ಚು ಪ್ರಕರಣಗಳು ದಾಖಲಾಗುವ ಅಂದಾಜಿದೆ.

ಇತ್ತೀಚೆಗೆ ಮುಖ್ಯಮಂತ್ರಿಯವರು ರಾಜ್ಯದ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜತೆ ನಡೆಸಿದ  ವೀಡಿಯೋ ಸಂವಾದದಲ್ಲಿ ಹಲವಾರು ಮಾಹಿತಿ ಸಂಗ್ರಹಿಸಿದ್ದಾರೆ. ಜಿಲ್ಲಾವಾರು ಪರಿಸ್ಥಿತಿಯ ಅಂಕಿ-ಅಂಶ ಪಡೆಯಲಾಗಿದೆ. ಜತೆಗೆ, ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾಹಿತಿಯನ್ನೂ ಪಡೆದಿದ್ದಾರೆ. ಸಭೆಯಲ್ಲಿ ಎಲ್ಲ ವಿಚಾರಗಳ ಬಗ್ಗೆಯೂ ಚರ್ಚಿಸಿ ತಜ್ಞರ ಸಲಹೆ ಮೇರೆಗೆ ಅಂತಿಮ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ.

ಸಾಧ್ಯತೆಗಳೇನು? :

  • ವಾರಾಂತ್ಯ ಕರ್ಫ್ಯೂ ವಾಪಸ್‌,
  • ರಾತ್ರಿ ಕರ್ಫ್ಯೂ 11ರಿಂದ ಬೆಳಗ್ಗೆ 5
  • ಬೆಂಗಳೂರು ಸೇರಿ ಪ್ರಕರಣ ಹೆಚ್ಚಾಗಿರುವ ಕಡೆ ವಾರಾಂತ್ಯ ಕರ್ಫ್ಯೂ ಒಂದು ಅಥವಾ ಎರಡು ವಾರ ಮುಂದುವರಿಕೆ
  • ಕಡಿಮೆ ಪ್ರಕರಣ ಇರುವ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ವಾಪಸ್‌, ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ
  • ಮಾರುಕಟ್ಟೆ, ಮಾಲ್‌, ಸಿನೆಮಾ ಮಂದಿರ, ಪಾರ್ಕ್‌ ಪ್ರವೇಶ ನಿರ್ಬಂಧ ಮುಂದುವರಿಕೆ

ಶುಕ್ರವಾರದ ಸಭೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಮುಖ್ಯಮಂತ್ರಿ ಅವರು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಎಲ್ಲರ ಸಲಹೆ ಪಡೆದು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಜನ ಸಾಮಾನ್ಯರ ಭಾವನೆಗಳನ್ನು ವಿರೋಧಿ ಸುವುದೂ ಇಷ್ಟವಿಲ್ಲ.  ಜನರಿಗೆ ತೊಂದರೆ ಕೊಡುವುದರಿಂದ ಸರಕಾರಕ್ಕೆ ಲಾಭವೂ ಇಲ್ಲ.ಡಾ| ಕೆ.ಸುಧಾಕರ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 

ಧಾರ್ಮಿಕ ಸ್ಥಳಗಳ ಧ್ವನಿವರ್ಧಕಗಳು ಶಾಲೆಗಳಿಗೆ ಹಸ್ತಾಂತರ

ಧಾರ್ಮಿಕ ಸ್ಥಳಗಳ ಧ್ವನಿವರ್ಧಕಗಳು ಶಾಲೆಗಳಿಗೆ ಹಸ್ತಾಂತರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

1-wd

ಲಂಡನ್: ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಡಾ.ಅಶ್ವತ್ಥನಾರಾಯಣ್

ಪರಿಷತ್‌ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ನಾಳೆ ಅಂತಿಮ

ಪರಿಷತ್‌ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ನಾಳೆ ಅಂತಿಮ

1–f-fsfsdf

ಅಸ್ಪೃಶ್ಯತೆ ಬೇಡ ಎಂದು ದಲಿತ ಸ್ವಾಮೀಜಿ ಎಂಜಲು ತಿಂದ ಜಮೀರ್ ಅಹಮದ್ ಖಾನ್

ಮೇ 24ರಿಂದ ದ್ವಿತೀಯ ಪಿಯು ಮೌಲ್ಯಮಾಪನ ಆರಂಭ

ಮೇ 24ರಿಂದ ದ್ವಿತೀಯ ಪಿಯು ಮೌಲ್ಯಮಾಪನ ಆರಂಭ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.