ಕಾವೇರಿ ನಿವಾಸದಲ್ಲಿ ಬಿಎಸ್ವೈ ಭೇಟಿ ಮಾಡಿದ ಸಿಎಂ ಬೊಮ್ಮಾಯಿ
Team Udayavani, Jan 1, 2022, 10:16 AM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾವೇರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.
ಹೊಸ ವರ್ಷ ಹಿನ್ನೆಲೆ ನಿಕಟಪೂರ್ವ ಸಿಎಂ ಬಿಎಸ್ವೈ ಅವರನ್ನು ಹಾಲಿ ಸಿಎಂ ಬೊಮ್ಮಾಯಿ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದರು.
ಇದನ್ನೂ ಓದಿ:ನೇಕಾರರ ಕೌಶಲಾಭಿವೃದ್ಧಿಗೆ ಪ್ರತ್ಯೇಕ ಸಂಸ್ಥೆ ರಚನೆ
ದೇವಳ ಭೇಟಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊಸ ವರ್ಷದ ಅಂಗವಾಗಿ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಮುನಿರತ್ನ ಟಿಟಿಡಿ ನಿರ್ದೇಶಕ ಶಶಿಧರ ಉಪಸ್ಥಿತರಿದ್ದರು.