ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್​ ಕೋವಿಡ್ ಗೆ ಬಲಿ : ಬಿ ಎಸ್ ವೈ ಸಂತಾಪ

Team Udayavani, May 14, 2021, 7:20 PM IST

cm bsy ex media advisor senior journalist mahadev prakash is no more

ಬೆಂಗಳೂರು : ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್​ ಕೋವಿಡ್​ ಸೋಂಕಿನಿಂದ ಸಾವನ್ನಪ್ಪಿದ್ದಾರೆ.  ಸಿಎಂ ಬಿಎಸ್​ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಅವರು, ಹೃದಯ ಸಂಬಂಧಿ ಕಾಯಿಲೆ ಕಾರಣ ನಾರಾಯಣ ಹೃದಯಾಲಯಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ  ಸಾವನ್ನಪ್ಪಿದ್ದಾರೆ.

ಪತ್ರಿಕೋದ್ಯಮದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರು ‘ಈ ಭಾನುವಾರ’ ಎಂಬ ಪತ್ರಿಕೆಯ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಅಂಕಣಕಾರರು, ರಾಜಕೀಯ ವಿಶ್ಲೇಷಕರಾಗಿ ಕೂಡ ಗುರುತಿಸಿಕೊಂಡಿದ್ದರು. ಜೊತೆಗೆ ಮಾಹಿತಿ ಮತ್ತು ಪ್ರಚಾರ ಇಲಾಖೆಯಲ್ಲಿ ಮಾಹಿತಿ ಸಹಾಯಕರಾಗಿಯೂ ಅವರು ಕಾರ್ಯ ನಿರ್ವಹಿಸಿದ ಅಪಾರ ಅನುಭವ ಅವರಿಗಿತ್ತು.

ಇದನ್ನೂ ಓದಿ : ಚಂಡ ಮಾರುತ ಭೀತಿ : ಕರಾವಳಿಯಲ್ಲಿ ವಿಸ್ತಾರಗೊಂಡ‌ ಕಡಲು ; ತೀರ ವಾಸಿಗಳಲ್ಲಿ ಆತಂಕ

 ಪತ್ರಕರ್ತ ಮಹದೇವ ಪ್ರಕಾಶ್​ ಅವರ ಸಾವಿಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಸಂತಾಪ ಸೂಚಿಸಿ ಟ್ವೀಟ್ ಮಾಡಿದ ಮುಖ್ಯಮಂತ್ರಿ ಬಿ ಎಸ್​ ವೈ,  ಖ್ಯಾತ ಲೇಖಕ, ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಅವರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ನನ್ನ ಮಾಧ್ಯಮ ಸಲಹೆಗಾರರಾಗಿಯೂ ಅವರು ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

1975ರಲ್ಲಿ ಮಾಜಿ ಮುಖ್ಯಮಂತ್ರಿ ವಿರೇಂದ್ರ ಪಾಟೀಲರು ಆರಂಭಿಸಿದ್ದ ‘ಲೋಕವಾಣಿ’ ಎಂಬ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮಕ್ಕೆ ಪಾದಾರ್ಪಣೆ ಮಾಡಿದ ಮಹದೇವ ಪ್ರಕಾಶ್, ಕಾಲಾಂತರದಲ್ಲಿ ​’ಈ ಭಾನುವಾರ’ ಎಂಬ ನಿಯತ ಕಾಲಿಕೆಗೆ ಸಂಪಾದಕರಾಗಿ ಕಾರ್ಯನಿರ್ವಹಿಸಿದರು. ‘ಹೊರಳು ನೋಟ’ ಎಂಬ ಅಂಕಣದ ಮೂಲಕ ಪ್ರಸ್ತುತ ರಾಜಕೀಯ ಘಟನೆಗಳನ್ನು ವಿಶ್ಲೇಷಣೆ ಮಾಡುತ್ತಿದ್ದರು. ‘ಸದನದಲ್ಲಿ ದೇವರಾಜ ಅರಸು’ ಎಂಬ ಕೃತಿಯನ್ನು ಅವರು ರಚಿಸಿದ್ದಾರೆ.

ಇನ್ನು, ಮುಖ್ಯಮಂತ್ರಿ ಬಿಎಸ್ ವೈ ಅವರ ಒಂದು ವರ್ಷ ಆಡಳಿತ ಕುರಿತು ‘ದಣಿವರಿಯದ ಧೀಮಂತ’ ಎಂಬ ಪುಸ್ತಕವನ್ನು ಕೂಡ ಹೊರ ತಂದಿದ್ದರು. ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರಾಗಿದ್ದ ಪ್ರಕಾಶ್, ಈಗಿನ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾಗಿರುವ ಹಿನ್ನಲೆ ಲಾಬಿ ಮಾಡಿ ಈ ಪ್ರಶಸ್ತಿ ಪಡೆದೆ ಎಂಬ ಮಾತು ಸಾರ್ವಜನಿಕವಲಯದಲ್ಲಿ ಮೂಡಬಾರದು ಎಂದು ಪ್ರಶಸ್ತಿಯನ್ನು ತಿರಸ್ಕರಿಸಿದ್ದು ಅವರ ಹೆಚ್ಚುಗಾರಿಕೆ.

ಇದನ್ನೂ ಓದಿ : ಅಫ್ಘಾನಿಸ್ತಾನ್: ಕಾಬೂಲ್ ಮಸೀದಿಯೊಳಗೆ ಬಾಂಬ್ ಸ್ಫೋಟ, ಇಮಾಮ್ ಸೇರಿ 12 ಮಂದಿ ಸಾವು

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.