ತುಳು ಅಕಾಡೆಮಿ ಪ್ರಶಸ್ತಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ
Team Udayavani, Feb 24, 2021, 12:04 PM IST
ಬೆಂಗಳೂರು: ಮಾರ್ಚ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಳು ಅಕಾಡೆಮಿಯ ಕಾರ್ಯ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿದೆ, ಕೋವಿಡ್ ಸಂದರ್ಭದಲ್ಲಿಯೂ ಕಲಾವಿದರಿಗೆ ಆಸರೆಯಾಗುವ ಮೂಲಕ ಮಾದರಿಯಾಗಿದ್ದೀರಿ, ಬೆಂಗಳೂರಿನ ನಗರದಲ್ಲಿ ತುಳು ಭಾಷಾ ಪ್ರಶಸ್ತಿ ಸಮಾರಂಭ ಆಯೋಜಿಸಿರುವುದು ಶ್ಲಾಘನೀಯ ಎಂದು ತಿಳಿಸಿ, ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸುವ ಭರವಸೆ ನೀಡಿದರು.
ಇದನ್ನೂ ಓದಿ:ಹಲವು ದಾಖಲೆಗಳ ಸರದಾರ ಮೊಟೆರಾದ ಸರ್ದಾರ್ ಪಟೇಲ್ ಕ್ರೀಡಾಂಗಣ
ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ಹಾಗೂ ಬಂದರುಗಳ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅವರು ಶುಭ ಹಾರೈಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅವರು ಅಕಾಡೆಮಿಯ ಚಟುವಟಿಕೆಯ ಹಾಗೂ ಯೋಜನೆಗಳಿಗೆ ವಿಶೇಷ ಅನುದಾನದ ಬಗ್ಗೆ ಪ್ರಸ್ತಾಪಿಸಿ, ಕಳೆದ ಮೂರು ವರ್ಷದ ಅವಧಿಯ ಪ್ರಶಸ್ತಿ ಪುರಸ್ಕೃತ ಸಮಾರಂಭವನ್ನು ರಾಜಧಾನಿಯಲ್ಲಿ ನಡೆಸುವ ಉದ್ದೇಶವನ್ನು ವಿವರವಾಗಿ ತಿಳಿಸಿದರು.
ಇದನ್ನೂ ಓದಿ:ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರ ಕಳೆದುಕೊಂಡಿದೆ? ಕೈ ಜಾರಿದ ಸಿಂಹಾಸನ ಒಂದು ಅವಲೋಕನ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಸದಸ್ಯ ಸಂಚಾಲಕಿ ಕಾಂತಿ ಶೆಟ್ಟಿ ಬೆಂಗಳೂರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ದಾವೋಸ್ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ
ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ
ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ
ರಾಜ್ಯದಲ್ಲಿ ಕಾಂಗ್ರೆಸ್ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ
ಶಿರಸಿಯ ರಂಗಭೂಮಿ ಕಲಾವಿದೆ ಶೀತಲ್ ಶ್ರೀಪಾದ ಭಟ್ ಅವರಿಗೆ ಕೆನಡಾದ ಲಿಟರರಿ ಅವಾರ್ಡ್