ಕುಮಾರಸ್ವಾಮಿ ಕೋವಿಡ್ ನಿಂದ ಶೀಘ್ರ ಗುಣಮುಖವಾಗಲಿ : ಸಿಎಂ ಬಿಎಸ್ ವೈ ಹಾರೈಕೆ
Team Udayavani, Apr 17, 2021, 12:10 PM IST
ಬೆಂಗಳೂರು : ಮಾಜಿ ಮುಖ್ಯಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಸೋಂಕಿನಿಂದ ಶೀಘ್ರ ಗುಣಮುಖವಾಗಲೆಂದು ಮುಖ್ಯಮಂತ್ರಿ ಯಡಿಯೂರಪ್ಪ ಆಶಿಸಿದ್ದಾರೆ.
ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿದ ಬಗ್ಗೆ ತಿಳಿದ ಸಿಎಂ ಬಿಎಸ್ ವೈ, ಕುಮಾರಸ್ವಾಮಿ ಕೋವಿಡ್ ನಿಂದ ಶೀಘ್ರ ಗುಣಮುಖವಾಗಲೆಂದು ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಕುಮಾರಸ್ವಾಮಿಯವರು ಕೋವಿಡ್ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಸಂಪೂರ್ಣ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಶನಿವಾರಯಷ್ಟೇ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸೋಂಕು ತಗುಲಿದ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರೇ ಹೇಳಿಕೊಂಡಿದ್ದರು.
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಕುಮಾರಸ್ವಾಮಿಯವರು ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಸಂಪೂರ್ಣ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ. https://t.co/X4NWvu2OTD
— B.S. Yediyurappa (@BSYBJP) April 17, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ