ಸಿಎಂ ಬೊಮ್ಮಾಯಿಯವರು ರೈತರ ಕ್ಷಮೆ ಕೋರಬೇಕು: ಡಿ.ಕೆ. ಶಿವಕುಮಾರ್ ಆಗ್ರಹ
Team Udayavani, Sep 20, 2021, 4:01 PM IST
ಬೆಂಗಳೂರು: ದೆಹಲಿಯಲ್ಲಿ ತಮ್ಮ ಹಕ್ಕಿಗಾಗಿ ರೈತರು ನಡೆಸುತ್ತಿರುವ ಹೋರಾಟವನ್ನು ‘ಪ್ರಾಯೋಜಿತ ಹೋರಾಟ’ ಎಂಬ ಮುಖ್ಯಮಂತ್ರಿ ಬೊಮ್ಮಾಯಿಯವರ ಹೇಳಿಕೆ ಆಘಾತಕಾರಿ. ಅವರು ಕೂಡಲೇ ರೈತರ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.
ವಿಧಾನಸೌಧದ ಬಳಿ ಸೋಮವಾರ ಮಧ್ಯಾಹ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಹಕ್ಕಿನ ರಕ್ಷಣೆಗಾಗಿ ಕಳೆದ ಒಂದು ವರ್ಷದಿಂದ ರೈತರು ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದು, ಈ ಹೋರಾಟವನ್ನು ಪ್ರಾಯೋಜಿತ ಹೋರಾಟ ಎಂದು ಮುಖ್ಯಮಂತ್ರಿಗಳು ಹೇಳಿರುವುದು ಸರಿಯಲ್ಲ ಎಂದರು.
ರೈತರು ಉತ್ತಮ ಉದ್ದೇಶದಿಂದ ಹೋರಾಟ ಮಾಡುತ್ತಿದ್ದು, ಈ ಹೋರಾಟ ಕೇವಲ ಅಲ್ಲಿರುವ ರೈತರ ಹೋರಾಟವಲ್ಲ. ಇದು ಇಡೀ ದೇಶದ ರೈತರಿಗೆ ಸಂಬಂಧಿಸಿದ ಹೋರಾಟ. ಅವರ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಈ ಹೋರಾಟಕ್ಕೆ ವಿಶ್ವದ ಅನೇಕ ನಾಯಕರುಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಇಂತಹ ಹೇಳಿಕೆ ನೀಡಿದ್ದಾರೆ. ರೈತರ ಹೋರಾಟ ಪ್ರಾಯೋಜಿತ ಆಗಿರುವುದು ನಿಜವೇ ಆಗಿದ್ದರೆ ಯಾರು ಈ ಹೋರಾಟ ಪ್ರಾಯೋಜಿಸುತ್ತಿದ್ದಾರೆ? ಕಾಂಗ್ರೆಸ್, ಬಿಜೆಪಿ ಅಥವಾ ಮತ್ತ್ಯಾರೂ ಕೂಡ ಪ್ರಾಯೋಜಕತ್ವ ನೀಡಿಲ್ಲ. ಪ್ರಜಾಪ್ರಭುತ್ವ ದೇಶದಲ್ಲಿ ಅವರು ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಸರ್ಕಾರ ಇದುವರೆಗೂ ಅವರ ಅಳಲು ಕೇಳಿಲ್ಲ, ಯಾಕೆ ಎಂದು ಡಿಕೆಶಿ ಪ್ರಶ್ನಿಸಿದರು.
ಅವರ ಹೇಳಿಕೆಯಂತೆ ಈ ಹೋರಾಟ ಕಾಂಗ್ರೆಸ್ ಪ್ರಾಯೋಜಿತವಲ್ಲ. ರೈತರು ಸದುದ್ದೇಶದಿಂದ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ. ದೇಶಾದ್ಯಂತ ರೈತರ ಬೆನ್ನಿಗೆ ನಿಂತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ