ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ
Team Udayavani, Apr 22, 2021, 11:11 AM IST
ಬೆಂಗಳೂರು: ಕೋವಿಡ್-19 ಪಾಸಿಟಿವ್ ಆಗಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಡಿಸ್ಚಾರ್ಜ್ ಆದರು. ಎ.16ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಬೆಳಗಾವಿ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ಸಿಎಂ ಯಡಿಯೂರಪ್ಪ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ಎ.16ರಂದು ರಾಮಯ್ಯ ಆಸ್ಪತ್ರೆಗೆ ಚೆಕಪ್ ಗೆ ಹೋಗಿದ್ದರು. ನಂತರ ಅವರಿಗೆ ಕೋವಿಡ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಇದನ್ನೂ ಓದಿ:ಭಾರತ: ಕಳೆದ 24ಗಂಟೆಗಳಲ್ಲಿ ದಾಖಲೆಯ 3.14 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆ
ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಿಎಸ್ ವೈ ಅಧಿಕಾರಿಗಳ ಸಭೆ ನಡೆಸುತ್ತಿದ್ದರು.
ಎರಡನೇ ಬಾರಿ ಕೋವಿಡ್: ಸಿಎಂ ಯಡಿಯೂರಪ್ಪ ಅವರಿಗೆ ಎರಡನೇ ಬಾರಿ ಕೋವಿಡ್ ಸೋಂಕು ದೃಢವಾಗಿತ್ತು. ಕಳೆದ ವರ್ಷವೂ ಸೋಂಕು ದೃಢವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಿಎಂ ಯಡಿಯೂರಪ್ಪ ಮಾರ್ಚ್ 12 ಕ್ಕೆ ಮೊದಲ ಡೋಸ್ ಕೊರೊನಾ ಲಸಿಕೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ