ಹೊಸ ಕಾಂಬಿನೇಷನ್ ತೆರೆಯಲು ಕಾಲೇಜುಗಳಿಗೆ ಅನುಮತಿ
Team Udayavani, Jun 26, 2019, 3:00 AM IST
ಬೆಂಗಳೂರು: ರಾಜ್ಯದ 20 ಪದವಿಪೂರ್ವ ಕಾಲೇಜುಗಳಿಗೆ ಹೊಸ ಕಾಂಬಿನೇಷನ್ ಹಾಗೂ ವಿಭಾಗಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ಕಲ್ಪಿಸಿದೆ. 2019-20ನೇ ಸಾಲಿನಿಂದ ರಾಜ್ಯದ ಕೆಲವು ಕಾಲೇಜುಗಳಲ್ಲಿ ಹೊಸ ಸಂಯೋಜನೆ ಅಥವಾ ವಿಭಾಗ ತೆರೆಯಲು ಜಿಲ್ಲಾ ಉಪನಿರ್ದೇಶಕರು, ಸಾರ್ವಜನಿಕರು ಹಾಗೂ ಜನ ಪ್ರತಿನಿಧಿಗಳು ಪ್ರಸ್ತಾವನೆ ಸಲ್ಲಿಸಿದ್ದರು.
ವಿದ್ಯಾರ್ಥಿಗಳ ಹಿತದೃಷ್ಟಿ ಹಾಗೂ ಕಾಲೇಜಿನ ಅಭಿವೃದ್ಧಿ ಪರಿಗಣಿಸಿ 20 ಕಾಲೇಜುಗಳಿಗೆ ಹೊಸ ಕಾಂಬಿನೇಷನ್ ಹಾಗೂ ವಿಭಾಗಗಳನ್ನು ತೆರೆಯಲು ಪದವಿಪೂರ್ವ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಹೊಸ ಕಾಂಬಿನೇಷನ್ ಅಥವಾ ವಿಭಾಗದಲ್ಲಿ ಬೋಧನೆ ಮಾಡಲು ಜಿಲ್ಲೆಯಲ್ಲಿರುವ ಹೆಚ್ಚುವರಿ ಉಪನ್ಯಾಸಕರ ಕಾರ್ಯಭಾರಕ್ಕೆ ಅನುಗುಣವಾಗಿ ಹಂಚಿಕೆ ಮಾಡಬೇಕು.
ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಂಡು 15 ದಿನದೊಳಗೆ ವರದಿ ಸಲ್ಲಿಸಲು ಜಿಲ್ಲಾ ಉಪನಿರ್ದೇಶಕರಿಗೆ ಇಲಾಖೆ ಸೂಚಿಸಿದೆ. ವಿಜಯಪುರ, ಬೆಂಗಳೂರು ಉತ್ತರ, ಹಾಸನ, ಬಳ್ಳಾರಿ, ರಾಮನಗರ, ಬಾಗಲಕೋಟೆ, ದಕ್ಷಿಣ ಕನ್ನಡ, ಬೀದರ್, ತುಮಕೂರು, ರಾಯಚೂರು, ಉಡುಪಿ ಮತ್ತು ಶಿವಮೊಗ್ಗದ ಆಯ್ದ ಕಾಲೇಜಿನಲ್ಲಿ ಹೊಸ ವಿಭಾಗ ಅಥವಾ ಕಾಂಬಿನೇಷನ್ ತೆರೆಯಲು ಅನುಮತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ