Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Team Udayavani, May 9, 2024, 9:25 PM IST

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಹಾರ ಪಟ್ಟಿಯಿಂದ ಹೊರಗುಳಿದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ ನೀಡಲು ಸರ್ಕಾರ ನಿರ್ಧರಿಸಿದೆ.

ರಾಜ್ಯದ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಅನೇಕ ರೈತರು ಹೊರಗುಳಿದಿದ್ದಾರೆ. ಅಂತಹ ಹಿಡುವಳಿದಾರರಿಗೂ ಪರಿಹಾರ ಸಿಗಲಿದೆ. ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ವಿತರಿಸಲಾಗುವುದು. ಅಷ್ಟೇ ಅಲ್ಲ, 2 ಲಕ್ಷ ಹೆಕ್ಟೇರ್‌ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದಲ್ಲದೆ, ಸಣ್ಣ ಮತ್ತು ಅತಿ ಸಣ್ಣ ಒಣಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ 3000 ರೂ. ಪರಿಹಾರ ನೀಡಲೂ ಸರ್ಕಾರ ತೀರ್ಮಾನಿಸಿದೆ. ಈ ರೈತರಿಗೆ ಒಟ್ಟಾರೆ 460 ಕೋಟಿ ರೂ. ಪರಿಹಾರ ರೂಪದಲ್ಲಿ ನೀಡಲಾಗುತ್ತಿದೆ ಎಂದು ವಿವರಿಸಿದರು.

ಇನ್ನು ಎನ್‌ಡಿಆರ್‌ಎಫ್ ಹಣ ಬಿಡುಗಡೆಯಾದ ತಕ್ಷಣ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇದುವರೆಗೆ ಮೊದಲ ಹಂತದಲ್ಲಿ 2000 ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಅಲ್ಲದೆ, ಇನ್ನೂ ಸುಮಾರು ಎರಡು ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ನಡೆದಿದೆ. ಈ ಸಂಬಂಧದ ದಾಖಲೆಗಳ ಪರಿಶೀಲನೆ ಸಾಗಿದೆ ಎಂದು ಹೇಳಿದರು.

ನೀರು ಮತ್ತು ಮೇವಿನ ನಿರ್ವಹಣೆಗಾಗಿ ಇದುವರೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 202 ಸಭೆಗಳನ್ನು ನಡೆಸಿದೆ ಹಾಗೂ 462 ತಾಲೂಕು ಮಟ್ಟದ ಟಾಸ್ಕ್ಫೋರ್ಸ್‌ ಸಭೆಗಳನ್ನು ಮಾಡಲಾಗಿದೆ. ನೀರಿನ ಸಮಸ್ಯೆಯಿಂದ 270 ಗ್ರಾಮಗಳಿಗೆ ಟ್ಯಾಂಕರ್‌ ಮುಖಾಂತರ ಮತ್ತು 594 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. 153 ನಗರ ಪ್ರದೇಶದ ವಾರ್ಡ್‌ಗಳಿಗೆ ಟ್ಯಾಂಕರ್‌ ಮೂಲಕ ಮತ್ತು 35 ವಾರ್ಡ್‌ಗಳಿಗೆ ಖಾಸಗಿ ಬೋರ್‌ವೆಲ್‌ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. ಅಗತ್ಯ ಇರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್‌ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ. ಈ ವೆಚ್ಚ ಭರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳ ಖಾತೆಗಳಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.