ಚಿಕ್ಕೋಡಿಯಿಂದಲೇ ಸ್ಪರ್ಧೆ: ಪ್ರಭಾಕರ ಕೋರೆ

Team Udayavani, Feb 4, 2019, 1:26 AM IST

ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈ ಸಲ ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಕೆ ವ್ಯಕ್ತಪಡಿಸಿದ್ದು, ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆಂದು ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿಕ್ಕೋಡಿಯಿಂದ ಸ್ಪರ್ಧಿಸಲು ನಾನು ಸಿದ್ಧ. ಟಿಕೆಟ್ ಕೊಟ್ಟರೆ ಇಲ್ಲ ಎನ್ನಲು ಆಗುವುದಿಲ್ಲ. ಚುನಾವಣೆಗಾಗಿ ಪಕ್ಷದಿಂದ ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಚಾರದ ತಂತ್ರ ರೂಪಿಸಲಾಗುತ್ತಿದೆ. ಟಿಕೆಟ್ ಯಾರಿಗೆ ಕೊಡುತ್ತಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ನನಗೆ ಕೊಟ್ಟರೆ ಸ್ಪರ್ಧಿಸಿ ಗೆಲುವು ಸಾಧಿಸುವುದು ಖಚಿತ. ಬೆಳಗಾವಿ ಕ್ಷೇತ್ರದಿಂದ ಹಾಲಿ ಸಂಸದ ಸುರೇಶ ಅಂಗಡಿಯವರೇ ಸ್ಪರ್ಧಿಸುತ್ತಾರೆ ಎಂದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ