ರಾಜಕೀಯ ಲೆಕ್ಕಾಚಾರದ ಮೇಲೆ ಮೊಳಕಾಲ್ಮೂರಿನಿಂದಲೇ ಸ್ಪರ್ಧೆ 

Team Udayavani, Apr 12, 2018, 1:27 PM IST

ಬಳ್ಳಾರಿ: ಪಕ್ಷದ ನಾಯಕರ ಸೂಚನೆಯ ಮೇರೆಗೆ ಮೊಳಕಾಲ್ಮೂರು ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಬಿಜೆಪಿ ಸಂಸದ ಶ್ರೀರಾಮುಲು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ‘ಪಕ್ಷದ ನಾಯಕರು ರಾಜಕೀಯ ಲೆಕ್ಕಾಚಾರಗಳ ಹಿನ್ನಲೆಯಲ್ಲಿ ಮೊಳಕಾಲ್ಮೂರಿನಿಂದ ಸ್ಪರ್ಧಿಸಲು ನನಗೆ ಸೂಚನೆ ನೀಡಿದ್ದಾರೆ’ಎಂದರು. 

‘ತಿಪ್ಪೇಸ್ವಾಮಿ ಅವರು ನನ್ನ ಅಣ್ಣನಂತೆ.ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸುತ್ತೇನೆ’ ಎಂದರು. 

ಪಕ್ಷದ ನಾಯಕರು ಸೂಚನೆ ನೀಡಿದರೆ 2 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇನೆ ಎಂದು ಅವರು ತಿಳಿಸಿದರು.

ತಿಪ್ಪೇಸ್ವಾಮಿ ಬಂಡಾಯ 
ಕಳೆತ ಚುನಾವಣೆಯಲ್ಲಿ ಬಿಎಸ್‌ಆರ್‌ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ತಿಪ್ಪೇಸ್ವಾಮಿ ಅವರು ಟಿಕೆಟ್‌ ನಿರಾಕರಿಸಿ ದ್ದ ರಿಂದ ನಾಯಕರ ವಿರುದ್ಧ ಬಂಡೆದ್ದಿದ್ದು ನನಗೆ ಇನ್ನೂ ಟಿಕೆಟ್‌ ಸಿಗುವ ನಿರೀಕ್ಷೆ ಇದೆ ಎಂದಿದ್ದರು. ತಿಪ್ಪೇಸ್ವಾಮಿ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ