ಗೃಹಸಚಿವ ಆರಗ ವಿರುದ್ಧ ಲೋಕಾಯುಕ್ತದಲ್ಲಿ ದೂರು: ರಾಜೀನಾಮೆಗೆ ಎಎಪಿ ಆಗ್ರಹ
Team Udayavani, Aug 26, 2022, 5:54 PM IST
ಬೆಂಗಳೂರು : ಜಿ ಕೆಟಗರಿ ಸೈಟು ಹಂಚಿಕೆ ನಿಷೇಧಗೊಳಿಸಿದ್ದರೂ ಸಹ ಬದಲಿ ನಿವೇಶನ ಹಂಚಿಕೆ ಎಂಬ ವಾಮಮಾರ್ಗವನ್ನು ಹುಡುಕಿಕೊಂಡು ಗೃಹಸಚಿವ ಅರಗ ಜ್ಞಾನೇಂದ್ರ ಹಾಗೂ ಇನ್ನಿತರ ಪ್ರಭಾವಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ಎಎಪಿ ರಾಜೀನಾಮೆಗೆ ಆಗ್ರಹಿಸಿದೆ.
ಕಳೆದ 4ವರ್ಷಗಳಿಂದ ಅತಿವೃಷ್ಟಿ ಹಾವಳಿಯಿಂದ ರಾಜ್ಯದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿದ್ದರು ಸಹ ಅವರುಗಳಿಗೆ ಸೂಕ್ತ ಮನೆಗಳನ್ನು ಕಟ್ಟಿಕೊಡಲು ವಿಫಲರಾಗಿರುವ ಬಿಜೆಪಿ ಸರ್ಕಾರ ಈಗ ತನ್ನ ಮಂತ್ರಿ ಹಾಗೂ ಪ್ರಭಾವಿಗಳಿಗೆ ಈ ರೀತಿಯ ಕೋಟ್ಯಂತರ ರೂಪಾಯಿಗಳ ಬೆಲೆಬಾಳುವ ನಿವೇಶನಗಳನ್ನು ಹಂಚಿಕೆ ಮಾಡುವ ಪರಿ 40 %ಕಮಿಷನ್ ಬಿಜೆಪಿ ಸರ್ಕಾರದ ಮತ್ತೊಂದು ರೂಪವಾಗಿದೆ ಎಂದು ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಸುಪ್ರೀಂಕೋರ್ಟ್ 2021 ರ ಅಕ್ಟೋಬರ್ 29 ರಂದು ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ಈ ರೀತಿಯ ಕೋಟ್ಯಂತರ ₹ ಬೆಲೆ ಬಾಳುವ ಆರ್ ಎಂವಿ ಬಡಾವಣೆ ಯಂತಹ ಪ್ರತಿಷ್ಠಿತ ಜಾಗದಲ್ಲಿ ಮಂತ್ರಿ ಮಹೋದಯರು ಗಳಿಗೆ ಸೈಟು ಹಂಚಿಕೆಯ ಅವ್ಯವಹಾರಗಳಲ್ಲಿ ಮುಳುಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ದೇಶದ ಅತ್ಯುನ್ನತ್ತ ನ್ಯಾಯಾಲಯಗಳ ಆದೇಶಗಳಿಗೂ ಸಹ ಕಿಂಚಿತ್ತೂ ಕಿಮ್ಮತ್ತು ಈ ಬಿಜೆಪಿ ಸರ್ಕಾರ ನೀಡುತ್ತಿಲ್ಲವೆಂದು ಎಂದು ಮೋಹನ್ ದಾಸರಿ ವಿಷಾದ ವ್ಯಕ್ತಪಡಿಸಿದರು.
ಉಂಡೂ ಹೋದ ಕೊಂಡೂ ಹೋದ ಎಂಬಂತೆ ರಾಜ್ಯದಲ್ಲಿ ಸಂಪೂರ್ಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ ಗೃಹಸಚಿವ ಅರಗ ಜ್ಞಾನೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಈ ಪ್ರಕರಣದಿಂದ ಸ್ಪಷ್ಟವಾಗುತ್ತಿದೆ.
ಈ ಕೂಡಲೇ ಅರಗ ಜ್ಞಾನೇಂದ್ರ ರನ್ನು ಸಂಪುಟದಿಂದ ವಜಾಗೊಳಿಸಬೇಕು ಅಥವಾ ಮರ್ಯಾದೆಯಿಂದ ತಾವೇ ರಾಜೀನಾಮೆ ನೀಡಬೇಕೆಂದು ರಾಜ್ಯ ವಕ್ತಾರ ಹಾಗೂ ಹಿರಿಯ ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಆಮ್ ಆದ್ಮಿ ಪಕ್ಷವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತೀವ್ರವಾದ ಹೋರಾಟಕ್ಕೆ ಇಳಿಯಲಿದೆ ಎಂದು ಸರಕಾರವನ್ನು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು