Elections; ಸ್ಥಳೀಯಾಡಳಿತ ಚುನಾವಣೆ ನಡೆಸಿ: ರಾಜ್ಯ ಚು. ಆಯೋಗ
ರಾಜ್ಯಕ್ಕೆ 2,100 ಕೋ. ರೂ. ಅನುದಾನ ಖೋತಾ: ಕಳವಳ ; ಚುನಾವಣೆ ವಿಳಂಬ ಹಿನ್ನೆಲೆಯಲ್ಲಿ ಸರಕಾರಕ್ಕೆ ಶೀಘ್ರ ಪತ್ರ
Team Udayavani, Aug 9, 2024, 7:10 AM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಿತ ರಾಜ್ಯದ ಜಿ.ಪಂ., ತಾ.ಪಂ. ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಿಗೆ 2025ರ ಮಾರ್ಚ್ ಅಂತ್ಯದ ವರೆಗೆ ಚುನಾವಣೆಗಳು ನಡೆಯದಿದ್ದರೆ ಕೇಂದ್ರ ಸರಕಾರದಿಂದ 15ನೇ ಹಣಕಾಸು ಆಯೋಗದಡಿ ರಾಜ್ಯಕ್ಕೆ ಬರಬೇಕಾದ 2,100 ಕೋಟಿ ರೂ. ಅನುದಾನ ಖೋತಾ ಆಗಲಿದೆ ಎಂದು ರಾಜ್ಯ ಚುನಾವಣ ಆಯೋಗ ಕಳವಳ ವ್ಯಕ್ತಪಡಿಸಿದೆ. ಈ ಮೂಲಕ ಈ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಿ ಎಂದು ಸರಕಾರಕ್ಕೆ ಪರೋಕ್ಷ ಸೂಚನೆ ನೀಡಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಚುನಾವಣ ಆಯುಕ್ತ ಜಿ.ಎಸ್. ಸಂಗ್ರೇಶಿ ಈ ವಿಷಯ ತಿಳಿಸಿದರು.
ಬಿಬಿಎಂಪಿ ಹಾಗೂ ಜಿ.ಪಂ.-ತಾ.ಪಂ.ಗಳಿಗೆ4 ವರ್ಷಗಳಿಂದ ಚುನಾ ವಣೆ ನಡೆದಿಲ್ಲ. 15ನೇ ಹಣಕಾಸು ಆಯೋಗ ದಲ್ಲಿ 2020-21ನೇ ಸಾಲಿನಿಂದೀಚೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 2,100 ಕೋ.ರೂ. ಅನುದಾನ ಬರಬೇಕಿತ್ತು. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು, ಅಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇದ್ದರೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಆಯೋಗದ ಷರತ್ತು ಇದೆ.
2025ರ ಮಾರ್ಚ್ ಅಂತ್ಯದ ವರೆಗೂ ಚುನಾವಣೆಗಳು ನಡೆ ಯದಿದ್ದರೆ 2,100 ಕೋಟಿ ರೂ. ಅನುದಾನ ನಮಗೆ ಸಿಗುವುದಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ರಾಜ್ಯ ಸರ ಕಾರಕ್ಕೆ ಶೀಘ್ರದಲ್ಲೇ ಪತ್ರ ಬರೆಯ ಲಾಗುವುದು ಎಂದು ಸಂಗ್ರೇಶಿ ತಿಳಿಸಿದರು.
ಮತ್ತೆ ಕೋರ್ಟ್‌ಗೆ ಮೊರೆ
ಕಾಲಮಿತಿಯೊಳಗೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ 2006ರಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ.
ಅವಧಿ ಮುಗಿಯುವ ಸ್ಥಳೀಯ ಸಂಸ್ಥೆಗಳಿಗೆ ಕಾಲಮಿತಿಯೊಳಗೆ ಚುನಾವಣೆ ನಡೆಸುವುದು ರಾಜ್ಯ ಚುನಾವಣ ಆಯೋಗದ ಸಂವಿಧಾನಬದ್ಧ ಹೊಣೆಗಾರಿ ಕೆಯಾಗಿದೆ. ವಾರ್ಡ್ ಕ್ಷೇತ್ರ ಪುನರ್‌ವಿಂಗಡಣೆ, ಮೀಸಲಾತಿ ಮತ್ತಿತರ ವಿಚಾರಗಳಿಂದ ಚುನಾವಣೆಗಳು ವಿಳಂಬವಾಗಿವೆ. ಕಾಲಮಿತಿ ಯೊಳಗೆ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಸ್ವತಃ ಚುನಾವಣ ಆಯೋಗ ನ್ಯಾಯಾಲಯದ ಮೊರೆ ಹೋಗಿದೆ. ಬಿಬಿಎಂಪಿ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಆ. 20ರಂದು ವಿಚಾರಣೆಗೆ ಬರಲಿದೆ. ತಾ.ಪಂ. ಜಿ.ಪಂ. ಮೀಸಲಾತಿ ನಿಗದಿಪಡಿಸುವ ವಿಚಾರದಲ್ಲಿ ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಡೆದುಕೊಂಡಿಲ್ಲ ಎಂದು ಸರಕಾರದ ವಿರುದ್ಧ ಚುನಾವಣ ಆಯೋಗವು ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಿದೆ. ಇದರ ವಿಚಾರಣೆ ಆ. 12ರಂದು ನಡೆಯಲಿದೆ. ನ್ಯಾಯಾಲಯದಲ್ಲಿ ಆಗುವ ಬೆಳವಣಿಗೆಗಳನ್ನು ಆಧರಿಸಿ ಆಯೋಗ ಮುಂದಿನ ಹೆಜ್ಜೆ ಇರಿಸಲಿದೆ. ಈ ವಿಚಾರದಲ್ಲಿ ಸರಕಾರ ಸಹಕಾರ ನೀಡದಿದ್ದರೆ ಆಯೋಗವು ಮತ್ತೆ ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಎಸ್.ಜಿ. ಸಂಗ್ರೇಶಿ ತಿಳಿಸಿದರು.
ಆಯೋಗದ ಕಾರ್ಯದರ್ಶಿ ಎಸ್. ಹೊನ್ನಾಂಬ ಮತ್ತಿತರ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.