ಬಡವರಿಗೆ 10 ಕೆಜಿ ಅಕ್ಕಿ ಕಾಂಗ್ರೆಸ್ನಿಂದ ಮೂರನೇ ಗ್ಯಾರಂಟಿ ಘೋಷಣೆ
Team Udayavani, Feb 25, 2023, 7:15 AM IST
ಬೆಂಗಳೂರು: ಗೃಹಜ್ಯೋತಿ, ಗೃಹಲಕ್ಷಿ$¾à ಯೋಜನೆ ಬಳಿಕ ಕಾಂಗ್ರೆಸ್ ಈಗ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದೆ.
ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಘೋಷಣೆ ಮಾಡಿದ್ದಾರೆ.
ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದು 3 ರೂ.ಬೆಲೆಯಲ್ಲಿ ಅಕ್ಕಿ ನೀಡಲು ಆರಂಭಿಸಿತ್ತು. 2013ರಲ್ಲಿ “ಅನ್ನಭಾಗ್ಯ’ ಯೋಜನೆ ನೀಡಿದ್ದೆವು. ಆಗ ಪ್ರತಿ ಸದಸ್ಯರಿಗೆ 7 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಿದ್ದೆವು ಎಂದರು.
ಪ್ರಜಾಧ್ವನಿ ಯಾತ್ರೆಯಲ್ಲಿ ಅಕ್ಕಿ ಹೆಚ್ಚಿಸುವಂತೆ ಜನ ಕೇಳಿದ್ದಾರೆ. ಈ ಬಳಿಕ ನಾವು ಚರ್ಚಿಸಿ ಈ ಯೋಜನೆಯನ್ನು ಪಕ್ಷದ 3ನೇ ಗ್ಯಾರಂಟಿಯಾಗಿ ಘೋಷಿಸುತ್ತಿದ್ದೇವೆ. 10 ಕೆಜಿ ಅಕ್ಕಿ ನೀಡುವುದರಿಂದರ 3ರಿಂದ 4 ಸಾವಿರ ಕೋಟಿ ರೂ. ಗೂ ಹೆಚ್ಚು ವೆಚ್ಚ ತಗಲಬಹುದು. ಅದನ್ನು ನಿಭಾಯಿಸಲಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್