ಒಬಿಸಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ ಕಾರಣ : ಸಿ.ಟಿ. ರವಿ
Team Udayavani, May 14, 2022, 8:39 PM IST
ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹೇಳಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದ ಕಾಂಗ್ರೆಸ್ ಬೆಂಬಲಿತ ಸರಕಾರವು ಸರಿಯಾಗಿ ಸಮರ್ಥನೆ ಮಾಡಿ ಹಿಂದುಳಿದ ವರ್ಗದ ಹಿತಾಸಕ್ತಿಯನ್ನು ಎತ್ತಿ ಹಿಡಿಯದ ಕಾರಣ ಹೀಗಾಗಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸತ್ಯವನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರಕಾರ ಹಿಂದುಳಿದ ವರ್ಗಗಳ ಪರ ಇದೆ. ದೇಶದಲ್ಲಿ ಮೊದಲ ಬಾರಿಗೆ ಸಂವಿಧಾನಬದ್ಧವಾಗಿ ಹಿಂದುಳಿದ ವರ್ಗಗಳಿಗೆ ಆಯೋಗ ರಚಿಸಿದ ಬಿಜೆಪಿ ಸರಕಾರ.
ನರೇಂದ್ರ ಮೋದಿಯವರ ಸರಕಾರ. ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡಲು ನಾವು ಬದ್ಧರಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳ್ಳತನದ ವೇಳೆ ಎಚ್ಚರಗೊಂಡ ಮಾಲೀಕ : ಓಡುವ ಭರದಲ್ಲಿ ಮನೆಯ ಮೇಲಿಂದ ಬಿದ್ದು ಸಾವನ್ನಪ್ಪಿದ ಕಳ್ಳ
ತಾಂಬೂಲ ಪ್ರಶ್ನೆಗಿಂತ ಹೆಚ್ಚಿನ ತೀರ್ಮಾನ ಕೇಶವ ಕೃಪಾದಲ್ಲಿ: ಹೆಚ್ ಡಿಕೆ
ಚಿಕ್ಕಮಗಳೂರು: ತಂದೆ – ಮಗನ ಪಬ್ ಜಿ ಜಗಳ; ತಾಯಿಯ ಕೊಲೆಯಲ್ಲಿ ಅಂತ್ಯ
ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ
ಜಿ.ಟಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿದ್ದರಾಮಯ್ಯ