ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್: ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
Team Udayavani, May 21, 2020, 6:18 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೋನಿಯಾ ಗಾಂಧಿ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಸಾಗರದ ವಕೀಲರೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಕಾಂಗ್ರೆಸ್ ನಾಯಕಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈತನ್ಮಧ್ಯೆ ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್ ಒತ್ತಾಯಿಸಿದೆ.
ಈ ಕುರಿತಾಗಿ ಸಿಎಂ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ ಸೋನಿಯಾ ಗಾಂಧಿ ವಿರುದ್ಧದ ಪ್ರಕರಣವನ್ನು ಕೈಬಿಡಲು ಮನವಿ ಮಾಡಿದೆ. ಅದಲ್ಲದೆ ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದೆ.
ಕಾಂಗ್ರೆಸ್ ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿದಂತೆ ಪ್ರಮುಖ ನಾಯಕರು ಸಾಥ್ ನೀಡಿದರು.